ಬೈಂದೂರು ವಿವಿಧ ಕಡೆಗಳಲ್ಲಿ ಸಂಭ್ರಮ ಸಡಗರದ ಸ್ವಾತಂತ್ರೋತ್ಸವ ಆಚರಣೆ

0
161

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಬೈಂದೂರು ತಾಲೂಕು ಘೋಷಣೆಯಾದ ಬಳಿಕ ಪ್ರಥಮ ಬಾರಿಗೆ ಸ್ವಾತಂತ್ರೋತ್ಸವ ಆಚರಣೆ ಬೈಂದೂರು ಗಾಂಧಿ ಮೈದಾನದಲ್ಲಿ ನಡೆಯಿತು.

ಬೈಂದುರು ತಹಶೀಲ್ದಾರ ಬಿ.ಪಿ ಪೂಜಾರ್ ದ್ವಜಾರೋಹಣಗೈದರು.

ತಹಶೀಲ್ದಾರರು ಹಾಗೂ ತಾಲೂಕು ದಂಡಾಧಿಕಾರಿಯವರ ಕಛೇರಿಯಲ್ಲಿ 73ನೇ ಸ್ವಾತಂತ್ರೋತ್ಸವನ್ನು ಸಂಭ್ರಮದಿಂದ ಆಚರಿಸಲಾಯಿತು.

ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಪೈನಾಡಿ ಇಲ್ಲಿ 73 ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು, ಶಾಲಾ ಎಸ್ ಡಿ ಎಮ್ ಸಿ ಅಧ್ಯಕ್ಷರಾದ ಶ್ರೀಮತಿ ರೇವತಿ ಇವರು ದ್ವಜಾರೋಹಣವನ್ನು ನೆರವೇರಿಸಿದರು, ಶಾಲಾ ಮಕ್ಕಳಿಗೆ ಸಮವಸ್ತ್ರ ಮತ್ತು ಸಿಹಿ ತಿಂಡಿಯನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರು, ಸಹ ಶಿಕ್ಷಕರು, ಎಸ್ ಡಿ ಎಮ್ ಸಿ ಸದಸ್ಯರು, ಹಳೇ ವಿದ್ಯಾರ್ಥಿಗಳು, ಹಾಗು ಶಾಲಾ ವಿಧ್ಯಾಭಿಮಾನಿಗಳು ಹಾಜರಿದ್ದರು.

ಅಮ್ಮನವರ ತೊಪ್ಪ್ಲು ಸ .ಕಿ.ಪ್ರಾ ಶಾಲೆ 73 ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

  

ವಂಡ್ಸೆ ಗ್ರಾಮ ಪಂಚಾಯತ್‍ನಲ್ಲಿ ನಡೆದ ಸ್ವಾತಂತ್ರ್ಯೋತ್ಸವದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಉದಯಕುಮಾರ್ ಶೆಟ್ಟಿ ಧ್ವಜಾರೋಹಣ ನೆರವೇರಿಸಿದರು. ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶಾರದಾ ರುದ್ರಯ್ಯ ಆಚಾರ್ಯ, ಸದಸ್ಯರಾದ ಉದಯ ಕೆ.ನಾಯ್ಕ್, ಗುಂಡು ಪೂಜಾರಿ, ಸಿಂಗಾರಿ, ಗ್ರಾ.ಪಂ.ಮಾಜಿ ಅಧ್ಯಕ್ಷ ಶ್ರೀನಿವಾಸ ಪೂಜಾರಿ, ವಂಡ್ಸೆ ಪಶು ಆಸ್ಪತ್ರೆಯ ವೈದ್ಯಾಧಿಕಾರಿ ಡಾ|ಬಾಬಣ್ಣ ಪೂಜಾರಿ, ಪಂಚಾಯತ್ ಅಭಿವೃದ್ದಿ ಅಧಿಕಾರಿ ರೂಪಾ ಗೋಪಿ, ಕಾರ್ಯದರ್ಶಿ ಶಂಕರ ಆಚಾರ್ಯ, ಎಸ್.ಎಲ್.ಆರ್.ಎಂ.ಮೇಲ್ವಿಚಾರಕಿ ವಿಜಯಲಕ್ಷ್ಮೀ, ವಂಡ್ಸೆ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಮಂಜುನಾಥ ಎ.ಜಿ, ಗ್ರಾ. ಪಂ. ಸಿಬ್ಬಂದಿಗಳು, ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.

ಭಾರತೀಯ ಜನತಾ ಪಾರ್ಟಿ ವಂಡ್ಸೆ ಜಿ.ಪಂ.ಕ್ಷೇತ್ರದ ಕಾರ್ಯಾಲಯದಲ್ಲಿ 73ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಜಿ.ಪಂ.ಸದಸ್ಯ, ಜಿ.ಪಂ.ಶಿಕ್ಷಣ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಬಾಬು ಶೆಟ್ಟಿ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಭಾರತೀಯ ಜನತಾ ಪಕ್ಷದ ವಿವಿಧ ಪದಾಧಿಕಾರಿಗಳು, ಸ್ಥಳೀಯ ಗಣ್ಯರು, ಸಾರ್ವಜನಿಕರು ಉಪಸ್ಥಿತರಿದ್ದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)