ನೂಜಾಡಿ-2 ಬಗ್ವಾಡಿ ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಕೊಡುಗೆ

0
63

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (7) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೂಜಾಡಿ-2 ಬಗ್ವಾಡಿ ಇಲ್ಲಿ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ಕುಂದಾಪುರ ಕೊಸ್ಟಲ್ ವತಿಯಿಂದ ಶುದ್ಧ ಕುಡಿಯುವ ನೀರಿನ ಘಟಕವನ್ನು ಕೊಡುಗೆಯಾಗಿ ನೀಡಲಾಯಿತು.

ಲಯನ್ಸ್ ಕ್ಲಬ್ ಕುಂದಾಪುರ ಕೊಸ್ಟಲ್‍ನ ಅಧ್ಯಕ್ಷ ಅಶೋಕ ಶೆಟ್ಟಿ ಸಂಸಾಡಿ ಧ್ವಜಾರೋಹಣ ನೆರವೇರಿಸಿದರು. ಎಸ್.ಡಿ,ಎಂ.ಸಿ ಅಧ್ಯಕ್ಷ ಮಂಜುನಾಥ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಸ್ಥಳೀಯ ಪಂಚಾಯತ್ ಪ್ರತಿನಿಧಿಗಳಾದ ರಾಧಾಕೃಷ್ಣ ಗಾಣಿಗ, ಪದ್ದು, ಎಸ್.ಡಿ.ಎಂ.ಸಿ ಉಪಾಧ್ಯಕ್ಷೆ ಪ್ರೇಮ, ಗ್ರಾಮದ ಹಿರಿಯ ಪುರೋಹಿತ ದೇವರಾಯ ಭಟ್, ಶಂಕರನಾರಾಯಣ ಭಟ್, ನಿವೃತ್ತ ಯುವಜನ ಕ್ರೀಡಾಧಿಕಾರಿ ಚಾರ ಕರುಣಾಕರ ಶೆಟ್ಟಿ, ಮಹಿಷಾಮರ್ದಿನಿ ಯುವಕ ಮಂಡಲದ ಅಧ್ಯಕ್ಷ ಪ್ರಕಾಶ ಆಚಾರ್ಯ, ದಾನಿಗಳಾದ ಅಜಿತ್ ಗಾಣಿಗ, ಲಯನ್ಸ್ ಸದಸ್ಯರು, ಪೋಷಕರು, ಎಸ್.ಡಿ.ಎಂಸಿ ಸದಸ್ಯರು ಉಪಸ್ಥಿತರಿದ್ದರು.

ಮುಖ್ಯೋಪಾಧ್ಯಾಯಿನಿ ಶೈಲಜಾ ಶೆಟ್ಟಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಬಗ್ವಾಡಿ ಮೆತ್ತಿನಮನೆ ಡಾ|ದಿನಕರ ಶೆಟ್ಟಿ ಕೊಡಮಾಡಿದ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು.ಸಹಶಿಕ್ಷಕಿ ಶೋಭಾ ಕಾರ್ಯಕ್ರಮ ನಿರ್ವಹಿಸಿ, ಜಯಂತಿ ವಂದಿಸಿದರು. ಸತ್ಯವತಿ ಮತ್ತು ಸ್ವಾತಿ ಸಹಕರಿಸಿದರು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (7) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)