ಕಿರಿಮಂಜೇಶ್ವರ ಶುಭದಾ ಆಂಗ್ಲ ಮಾಧ್ಯಮ ಶಾಲೆ- ಕಸ್ಟರ್ ಮಟ್ಟದ ಪ್ರತಿಭಾಕಾರಂಜಿ ಸ್ಪರ್ಧೆ

0
73

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಕಿರಿಮಂಜೇಶ್ವರ : ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಬೈಂದೂರು ಶುಭದಾ ಆಂಗ್ಲ ಮಾಧ್ಯಮ ಶಾಲೆಯ ಆಶ್ರಯದಲ್ಲಿ ಶುಭಾದ ಶಾಲಾ ಸಭಾಂಗಣದಲ್ಲಿ ಕಿರಿಮಂಜೇಶ್ವರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿದ ಕುಂದಾಪುರ ತಾಲೂಕು ಪಂಚಾಯತ್ ಅಧ್ಯಕ್ಷೆ ಶ್ಯಾಮಲ ಕುಂದರ್ ಮಾತನಾಡಿ ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ ಅವರಿಗೆ ಸೂಕ್ತ ವೇದಿಕೆಯನ್ನು ಕಲ್ಪಸಿಕೊಡಬೇಕು ಈ ನಿಟ್ಟಿನಲ್ಲಿ ಸರಕಾರ ವಿದ್ಯಾರ್ಥಿಗಳಲ್ಲಿನ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಕಾರ್ಯಕ್ರಮ ನಡೆಸುತ್ತಿದೆ ಎಂದು ತಿಳಿಸಿದರು. ಉಡುಪಿ ಜಿಲ್ಲಾ ಪಂಚಾಯತ್ ಸದಸ್ಯರಾದ ಗೌರಿ ದೇವಾಡಿಗ ತಮ್ಮ ಅತಿಥಿ ಭಾಷಣದಲ್ಲಿ ಶಾಲೆಯ ವ್ಯವಸ್ಥೆಯನ್ನು ಗುರುತಿಸಿ ಪ್ರಶಂಸಿಸಿದರು ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಕ್ರೀಯಾಶೀಲವಾಗಿ ಪ್ರದರ್ಶಿಸುವಂತೆ ಪ್ರೋತ್ಸಾಹಿಸಿದರು. ಶಾಲಾ ಆಡಳಿತ ಮಂಡಳಿಯ ಸಂಚಾಲಕ ಶಂಕರ ಪೂಜಾರಿ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮನ್ನು ಯಶಸ್ವಿಯಾಗಿ ಎಲ್ಲರ ಸಹಕಾರ ಕೇಳಿ ಶುಭಕೋರಿದರು. ಬಿ. ಆರ್ ಪಿ ಕರುಣಾಕರ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿಶ್ವನಾಥ ಪೂಜಾರಿ ಆಡಳಿತ ಕಿರಿಮಜೇಶ್ವರ ಕ್ಲಸ್ಟರ್‍ನ ಸಮೂಹ ಸಂಪನ್ಮೂಲ ವ್ಯಕ್ತಿ ಬಂಗ್ಲೆ ನಾಗರಾಜ, ಮಂಡಳಿಯ ಸದಸ್ಯ ರಾಮಕೃಷ್ಣ ಬಿಲ್ಲವ, ಸಲಹಾ ಸಮಿತಿಯ ಸದಸ್ಯ ರಾಜೀವ ಶೆಟ್ಟಿ ಸಂಯೋಜಕಿ ಗೀತಾದೇವಿ ಅಡಿಗ, ವಿದ್ಯಾರ್ಥಿ ನಾಯಕ ಹೃತ್ವಿಕ್ ಮತ್ತಿತರರು ಉಪಸ್ಥಿತರಿದ್ದರು.

ಮುಖ್ಯ ಶಿಕ್ಷಕ ರವಿದಾಸ್ ಶೆಟ್ಟಿ ಸ್ವಾಗತಿಸಿದರು. ಶಿಕ್ಷಕಿ ಅನಿತಾ ಬಿಜೂರು ನಿರೂಪಿಸಿದರು. ಯು.ಎಚ್ ರಾಜರಾಮ್ ವಂದಿಸಿದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)