ನಾಡ : ಮಳೆ ನೀರು ಕೊಯ್ಲು ಪ್ರಾತ್ಯಕ್ಷತೆ

0
92

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೈಂದೂರು ತಾಲೂಕು ಕಿರಿಮಂಜೇಶ್ವರ ವಲಯದ ನಾಡ ಗ್ರಾಮದ ಶ್ರೀಮತಿ ಶಾಂತಾರವರು ಮನೆಯಲ್ಲಿ ಮಳೆ ನೀರು ಕೊಯ್ಲು ಪ್ರಾತ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷ ಭಾಸ್ಕರ ಆಚಾರ್ಯ ಉದ್ಘಾಟಿಸಿದರು.
ಮಳೆ ನೀರು ಇಂಗಿಸುವ ಕಾರ್ಯಕ್ರಮವನ್ನು ಎಲ್ಲಾ ಸದಸ್ಯರು ಅಳವಡಿಸಿಕೊಳ್ಳಬೇಕೆಂದು ತಿಳಿಸಿದರು.

ಮಂಜುನಾಥ ನೀರಿನ ಮಹತ್ವ ಹಾಗೂ ಮಳೆ ನೀರು ಕೊಯ್ಲಿನಿಂದಾಗುವ ಪ್ರಯೋಜನದ ಬಗ್ಗೆ ಪ್ರತ್ಯೇಕವಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಶಾಂತ ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.

ಜ್ಞಾನವಿಕಾಸ ಸಮನ್ವಯಾಧಿಕಾರಿ ಕುಮಾರಿ ಗೀತಾ ನಿರೂಪಿಸಿದರು, ವಲಯ ಮೇಲ್ವಿಚಾರಕಿ ಶ್ರೀಮತಿ ರುಕ್ಮಿಣಿ ಸ್ವಾಗತಿಸಿದರು, ಸೇವಾಪ್ರತಿನಿಧಿ ನಾಗರತ್ನ ವಂದಿಸಿದರು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)