ನಾಯ್ಕನಕಟ್ಟೆ : ಕಾರುಗಳು ಮುಖಾಮುಖಿ ಡಿಕ್ಕಿ- ಓರ್ವ ಸಾವು ಮೂವರಿಗೆ ಗಾಯ

0
142

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

  

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಓರ್ವ ಸಾವನ್ನಪ್ಪಿ, ಮೂವರು ಗಾಯಗೊಂಡಿರುವ ಘಟನೆ ಬೈಂದೂರಿನ ನಾಯ್ಕನಕಟ್ಟೆಯಲ್ಲಿ ನಡೆದಿದೆ.

ಈ ಘಟನೆಯಲ್ಲಿ ಭಟ್ಕಳದ ಹೋಟೆಲ್ ಉದ್ಯಮಿ ನೂರುಲ್ ಅಮೀನ್ (48) ಸಾವನ್ನಪ್ಪಿದ್ದಾರೆ.

ಈ ಘಟನೆ ಬೆಳಿಗ್ಗೆ ನಡೆದಿದ್ದು, ಮಂಗಳೂರಿನಿಂದ ಭಟ್ಕಳದತ್ತ ಹೋಗುತ್ತಿದ್ದ ಮಾರುತಿ ಸ್ವಿಪ್ಟ್ ಕಾರು ರಸ್ತೆಯ ಡಿವೈಡರ್ ಹಾರಿ ಎದುರಿನಿಂದ ಬರುತ್ತಿದ್ದ ಇಯಾನೋ ಕಾರಿಗೆ ಮುಖಾಮುಖಿ ಡಿಕ್ಕಿಯಾಗಿದೆ.

ಈ ಸಂಬಂಧ ಬೈಂದೂರು ಪೊಲೀಸ್ ಠಾಣೆಯಪಿಎಸ್‍ಐ ತಿಮ್ಮೇಶ್ ಬಿ.ಎನ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)