ಕಡಿಯಾಳಿ : ಮಗುಚಿ ಬಿದ್ದ ಆಟೋ- 8 ವಿದ್ಯಾರ್ಥಿಗಳಿಗೆ ಗಾಯ ..!

0
311

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಉಡುಪಿ : ಆಟೋ ರಿಕ್ಷಾವೊಂದು ಮಗುಚಿ ಬಿದ್ದು ರಿಕ್ಷಾದಲ್ಲಿದ್ದ ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಕಡಿಯಾಳಿಯಲ್ಲಿ ನಡೆದಿದೆ.

ಇಂದು ಬೆಳಗ್ಗೆ ಆಟೋರಿಕ್ಷಾದಲ್ಲಿ ಮಕ್ಕಳನ್ನು ಶಾಂತಿನಗರದಿಂದ ಕಡಿಯಾಳಿ ಕಡೆಗೆ ಕರೆದುಕೊಂಡುಹೋಗುವ ಸಂದರ್ಭದಲ್ಲಿ ಎದುರಿಗೆ ಹೋಗುತ್ತಿದ್ದ ಬೈಕ್ ಸವಾರ ದಿಡೀರನೇ ಬ್ರೇಕ್ ಹಾಕಿದ್ದಾರೆ. ಹಿಂದಿನಿಂದ ಬರುತ್ತಿದ್ದಾ ರಿಕ್ಷಾ ಚಾಲಕ ಆಗುವ ಅವಘಡದಿಂದ ತಪ್ಪಿಸಲು ಅವರೂ ಕೂಡ ಬ್ರೇಕ್ ಹಾಕಿದ್ದಾರೆ. ಇದರಿಂದ ನಿಯಂತ್ರಣ ತಪ್ಪಿ ರಿಕ್ಷಾ ಮಗುಚಿ ಬಿದ್ದಿದೆ.

ರಿಕ್ಷಾದಲ್ಲಿದ್ದ 8 ಮಕ್ಕಳಿಗೂ ಸಣ್ಣ ಪುಟ್ಟ ಗಾಯಗಳಾಗಿದ್ದು ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಯಾವುದೇ ಪ್ರಾಣ ಹಾನಿ ಆಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳಕ್ಕೆ ಮಣಿಪಾಲ ಪೊಲೀಸರು ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)