ಡಿಕೆಶಿ ಬಂಧನ ಖಂಡಿಸಿ ಯುವ ಕಾಂಗ್ರೆಸ್ ಸಮಿತಿ ಬೈಂದೂರು ವಿಧಾನಸಭಾ ಕ್ಷೇತ್ರದ ವತಿಯಿಂದ ಬೃಹತ್ ಪ್ರತಿಭಟನೆ

0
151

ಹೆಚ್ಚಿನ ಓದುಗರು ಈ ಸುದ್ದಿಯನ್ನು ಖಂಡಿಸುವೆ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (6) ಸಮ್ಮತ (3) ಅಸಮ್ಮತ (0) ಖಂಡಿಸುವೆ (9) ಅಭಿಪ್ರಾಯವಿಲ್ಲ (0)

ಬೈಂದೂರು: ಕೇಂದ್ರದ ಬಿಜೆಪಿ ಸರಕಾರ ಐಟಿ ಹಾಗೂ ಇಡಿ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಂಡು ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿ ರಾಜಕೀಯ ಪ್ರೇರಿತವಾಗಿ ಶುದ್ಧ ಹಸ್ತರಾದ ಕಾಂಗ್ರೆಸ್ ನಾಯಕರು ಹಾಗೂ ಮಾಜಿ ಸಚಿವರಾದ ಡಿ.ಕೆ ಶಿವಕುಮಾರ್ ಅವರನ್ನು ಬಂಧಿಸಿರವುದನ್ನು ಖಂಡಿಸಿ ಯುವ ಕಾಂಗ್ರೆಸ್ ಸಮಿತಿ ಬೈಂದೂರು ವಿಧಾನಸಭಾ ಕ್ಷೇತ್ರದ ವತಿಯಿಂದ ಬೃಹತ್ ಪ್ರತಿಭಟನೆಯನ್ನು ಬೈಂದೂರು ಸರ್ಕಲ್ ಬಳಿ ನಡೆಸಿದರು.

ಈ ಸಂದರ್ಭದಲ್ಲಿ ಡಿಕೆಶಿ ಅವರ ಬಂಧನವನ್ನು ಖಂಡಿಸಿ ಅವರ ಬೆಂಬಲಿಗರು, ಕಾಂಗ್ರೆಸ್ ಕಾರ್ಯಕತರು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರಕ್ಕೂ ಹಾಗೂ ರಾಜ್ಯ ಸರ್ಕಾರಕ್ಕೂ ದಿಕ್ಕಾರ ಕೂಗುತ್ತಾ ಪ್ರತಿಭಟನೆ ನಡೆಸಿದರು. ಹಾಗೂ ಟಯರ್‍ನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಖಂಡಿಸುವೆ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (6) ಸಮ್ಮತ (3) ಅಸಮ್ಮತ (0) ಖಂಡಿಸುವೆ (9) ಅಭಿಪ್ರಾಯವಿಲ್ಲ (0)