ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ 46ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಪ್ರಯುಕ್ತ ನಡೆದ ಧಾರ್ಮಿಕ ಸಭೆ-ಸಾಧಕರಿಗೆ ಸನ್ಮಾನ

0
24

ಹೆಚ್ಚಿನ ಓದುಗರು ಈ ಸುದ್ದಿಯನ್ನು ಸಮ್ಮತ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (1) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

  

ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ 46ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಪ್ರಯುಕ್ತ ನಡೆದ ಧಾರ್ಮಿಕ ಸಭೆಯಲ್ಲಿ ಸಾಧಕರನ್ನು ಸನ್ಮಾನಿಸಲಾಯಿತು.

 ಉಪ್ಪುಂದ ಕಲ್ಯಾಣಿ ಪರಮೇಶ್ವರ ಭಟ್ ಟ್ರಸ್ಟ್ ಬೆಂಗಳೂರು ಇವರು ಸಾಧಕರಿಗೆ ಸನ್ಮಾನ ಕಾರ್ಯಕ್ರಮದ ಪ್ರಾಯೋಜಕತ್ವ ವಹಿಸಿದ್ದರು. ಯು . ರಮೇಶ ಕಾರಂತ್ ಸಮಾರಂಭದ ಅಧ್ಯಕ್ಷತೆವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬಿ ವಿಶ್ವೇಶ್ವರ ಅಡಿಗ,ಶಿವರಾಮ್ ಕೊಠಾರಿ ಉಪಸ್ಥಿತರಿದ್ದರು.

ಕಳೆದ ಸಾಲಿನ ದ್ವಿತೀಯ ಪಿಯುಸಿಯಲ್ಲಿ ಕರ್ನಾಟಕ ರಾಜ್ಯದಲ್ಲಿ ವಿಜ್ಞಾನ ವಿಭಾಗದಲ್ಲಿ 5ನೇ ರ್ಯಾಂಕ್ ವಿಜೇತ ರೋಹನ್ ರಾವ್ JH, ಡಾಕ್ಟರೇಟ್ ಪದವಿ ಪುರಸ್ಕ್ರತರಾದ ಭವಾನಿ ಶಂಕರ್ ಭಟ್ ಉಪ್ಪುಂದ,CA ತೇರ್ಗಡೆ ಹೊಂದಿದ ಗ್ರಾಮೀಣ ಪ್ರತಿಭೆ ಚಂದ್ರ ದೇವಾಡಿಗ ಸಾಲಿಮಕ್ಕಿ ಬಿಜೂರು ಕಳೆದ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉಪ್ಪುಂದ ಹಾಗೂ ಬಿಜೂರು ಗ್ರಾಮದ ಪ್ರೌಢ ಶಾಲೆ ಹಾಗೂ ಕಾಲೇಜುಗಳಲ್ಲಿ ಕಲಿತು 90% ಕ್ಕಿಂತ ಹೆಚ್ಚಿಗೆ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು.ಗಿರೀಶ್ ಶೇಟ್ ಕಾರ್ಯಕ್ರಮ ನಿರೂಪಿಸಿದರು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಸಮ್ಮತ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (1) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)