ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿನಿಯರು ರಾಜ್ಯಮಟ್ಟದ ಕಬಡ್ಡಿ ಪಂದ್ಯಾವಳಿಗೆ ಆಯ್ಕೆ

0
155

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (3) ಸಮ್ಮತ (0) ಅಸಮ್ಮತ (0) ಖಂಡಿಸುವೆ (2) ಅಭಿಪ್ರಾಯವಿಲ್ಲ (0)

ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಶಿರೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಪದವಿ ಪೂರ್ವ ವಿದ್ಯಾರ್ಥಿಗಳ ಕಬಡ್ಡಿ ಪಂದ್ಯಾವಳಿಯಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದು. ಮೂರು ವಿದ್ಯಾರ್ಥಿನಿಯರು ಧಾರವಾಡದಲ್ಲಿ ನಡೆಯಲಿರುವ ರಾಜ್ಯಮಟ್ಟದ ಕಬಡ್ಡಿ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ.

ದಿವ್ಯ ದ್ವಿತೀಯ ವಾಣಿಜ್ಯ ವಿಭಾಗ, ದೀಪ್ತಿ ದ್ವಿತೀಯ ವಾಣಿಜ್ಯ ವಿಭಾಗ, ಸ್ವಾತಿ ಪ್ರಥಮ ವಾಣಿಜ್ಯ ವಿಭಾಗ ರಾಜ್ಯಮಟ್ಟದ ಕಬಡ್ಡಿ ಪಂದ್ಯಾವಳಿಗೆ ಆಯ್ಕೆಯಾದ ವಿದ್ಯಾರ್ಥಿನಿಯರು. ವಿದ್ಯಾರ್ಥಿನಿಯರಿಗೆ ದೈಹಿಕ ಶಿಕ್ಷಣ ಉಪನ್ಯಾಸಕ ಸುಕೇಶ್ ಶೆಟ್ಟಿ ಹೊಸಮಠ ,ದೈಹಿಕ ಶಿಕ್ಷಣ ಶಿಕ್ಷಕ ಸಚಿನ್ ಕುಮಾರ್ ಶೆಟ್ಟಿ ಹುಂಚನಿ ಇವರು ವಿದ್ಯಾರ್ಥಿಗಳಿಗೆ ತರಬೇತಿ ನೀಡಿದರು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (3) ಸಮ್ಮತ (0) ಅಸಮ್ಮತ (0) ಖಂಡಿಸುವೆ (2) ಅಭಿಪ್ರಾಯವಿಲ್ಲ (0)