ನೆಟ್ ಬಾಲ್ ನಲ್ಲಿ ಸತತ 12ನೇ ಬಾರಿ ರಾಜ್ಯ ಮಟ್ಟವನ್ನು ಪ್ರತಿನಿಧಿಸುತ್ತಿರುವ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಪ್ರೌಢಶಾಲೆ ವಿದ್ಯಾರ್ಥಿಗಳು

0
73

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

  

ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಶ್ರೀ ಮೂಕಾಂಬಿಕಾ ದೇವಳದ ಪ್ರೌಢಶಾಲೆ ಕೊಲ್ಲೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ನೆಟ್ ಬಾಲ್ ಪಂದ್ಯಾಟದಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಪ್ರೌಢಶಾಲೆ ಬಾಲಕ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ.

ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಹರೀಶ್ ಕುಮಾರ್ ಶೆಟ್ಟಿ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಎಸ್ ಕುಮಾರ್ ಹಾಗೂ ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಕೆ ರಮೇಶ್ ಗಾಣಿಗ, ನರಸಿಂಹ ಹಳಗೇರಿ ,ಗ್ರಾಮ ಪಂಚಾಯತ್ ಪಂಚಾಯತ್ ಸದಸ್ಯರಾದ ಪ್ರಕಾಶ್ ಪೂಜಾರಿ, ದೈಹಿಕ ಶಿಕ್ಷಣ ಉಡುಪಿ ಜಿಲ್ಲಾ ಅಧೀಕ್ಷಕರಾದ ಮಧುಕರ್ ಎಸ್, ಬೈಂದೂರು ವಲಯ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಚಂದ್ರಶೇಖರ್ ಶೆಟ್ಟಿ,ಕುಂದಾಪುರ ವಲಯ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ದತ್ತಾತ್ರೇಯ ನಾಯಕ್, ಮುಖ್ಯೋಪಾಧ್ಯಾಯರಾದ ನಾಗರಾಜ್ ಭಟ್ ,ದೈಹಿಕ ಶಿಕ್ಷಣ ಶಿಕ್ಷಕರಾದ ಸಚಿನ್ ಕುಮಾರ್ ಶೆಟ್ಟಿ ಹುಂಚನಿ , ದೈಹಿಕ ಶಿಕ್ಷಣ ಉಪನ್ಯಾಸಕರಾದ ಸುಕೇಶ್ ಶೆಟ್ಟಿ ಹೊಸಮಠ, ನೆಟ್ ಬಾಲ್ ತೀರ್ಪುಗಾರ ಅವಿನಾಶ್ ಆಚಾರ್ಯ ಕೊಲ್ಲೂರು ಉಪಸ್ಥಿತರಿದ್ದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)