ಕಾಂಗ್ರೆಸ್ ಗೆ ಮತ್ತೊಂದು ಶಾಕ್: ಮಾಜಿ ಡಿಸಿಎಂ ಪರಮೇಶ್ವರ್ ನಿವಾಸದ ಮೇಲೂ ಐಟಿ ದಾಳಿ

0
433

ಹೆಚ್ಚಿನ ಓದುಗರು ಈ ಸುದ್ದಿಯನ್ನು ಖಂಡಿಸುವೆ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (1) ಅಭಿಪ್ರಾಯವಿಲ್ಲ (0)

ಮಾಜಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರಿಗೆ ಐಟಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ಬಿಗ್ ಶಾಕ್ ನೀಡಿದ್ದಾರೆ.

ಜಿ. ಪರಮೇಶ್ವರ್ ಅವರಿಗೆ ಸೇರಿದ ಶಿಕ್ಷಣ ಸಂಸ್ಥೆಗಳು ಮತ್ತು ಬೆಂಗಳೂರಿನ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ತುಮಕೂರಿನಲ್ಲಿರುವ ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆಗೆ ಸೇರಿದ ಇಂಜಿನಿಯರಿಂಗ್ ಕಾಲೇಜು, ಪದವಿ ಕಾಲೇಜು, ನೆಲಮಂಗಲದ ಮೆಡಿಕಲ್ ಕಾಲೇಜು ಮತ್ತು ಬೆಂಗಳೂರಿನ ಸದಾಶಿವನಗರದ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಈ ಕುರಿತಾಗಿ ಪ್ರತಿಕ್ರಿಯೆ ನೀಡಿರುವ ಪರಮೇಶ್ವರ್, ಐಟಿ ದಾಳಿ ಸಹಜ ಪ್ರಕ್ರಿಯೆ. ನಾವು ಏನಾದರೂ ತಪ್ಪು ಮಾಡಿದರೆ ಅವರ ಸಲಹೆಯನ್ನು ಸ್ವೀಕರಿಸುತ್ತೇವೆ. ತಪ್ಪುಗಳಿದ್ದರೆ ಐಟಿ ದಾಳಿ ಮಾಡಲಿ ಎಂದು ಹೇಳಿದ್ದಾರೆ.

ಕೊರಟಗೆರೆಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ತಮ್ಮ ಸಂಸ್ಥೆಯ ಮೇಲೆ ಐಟಿ ದಾಳಿ ನಡೆದಿರುವುದು ಒಳ್ಳೆಯದೇ. ದಾಖಲೆ ಪರಿಶೀಲನೆ ನಡೆಸಿದ ಬಳಿಕ ಏನಾದರೂ ತೆರಿಗೆ ವಂಚನೆ, ನಿಯಮ ಉಲ್ಲಂಘಿಸಿದ್ದರೆ ತಿಳಿಸುತ್ತಾರೆ ಎಂದು ಹೇಳಿದ್ದಾರೆ.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಖಂಡಿಸುವೆ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (1) ಅಭಿಪ್ರಾಯವಿಲ್ಲ (0)