ಶ್ರೀಕ್ಷೇತ್ರ ಧರ್ಮಸ್ಥಳ ಸಮುದಾಯ ಅಭಿವೃದ್ಧಿ ವತಿಯಿಂದ ಕಟ್ಟಡ ನಿರ್ಮಾಣಕ್ಕೆ ಸಹಾಯಧನ ಹಸ್ತಾಂತರ

0
151

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ)ಬೈಂದೂರು ತಾಲ್ಲೂಕು ಉಪ್ಪುಂದ ವಲಯದ ಕಂಬದಕೋಣೆಯ “ಕರ್ನಾಟಕ ಖಾರ್ವಿ ಯಾನೆ ಹರಿಕಾಂತ ಮಹಾಜನ ಸಂಘ ಉಪ್ಪುಂದ” ಇದರ ನೂತನ ಸಭಾಭವನಕ್ಕೆ ಶ್ರೀ ಕ್ಷೇತ್ರದ ಸಮುದಾಯ ಅಭಿವೃದ್ಧಿ ವಿಭಾಗದಿಂದ ಮಂಜೂರಾದ 10,00,000 (ಹತ್ತು ಲಕ್ಷ) ಮೊತ್ತದ ಡಿಡಿಯನ್ನು ಯೋಜನೆಯ ಕರಾವಳಿ ಪ್ರಾದೇಶಿಕ ನಿರ್ದೇಶಕ ಕೆ. ಮಹಾವೀರ ಅಜ್ರಿ ಸರ್ ರವರು ಸಮಿತಿಯ ಅಧ್ಯಕ್ಷ ರಾಮಚಂದ್ರ ಖಾರ್ವಿ ಅವರಿಗೆ ಹಸ್ತಾಂತರಿಸಿದರು.

ಸದ್ರಿ ಕಾರ್ಯಕ್ರಮದಲ್ಲಿ ಯೋಜನೆಯ ತಾಲ್ಲೂಕು ಯೋಜನಾಧಿಕಾರಿ ಶ್ರೀಮತಿ ಶಶಿರೇಖಾ ಪಿ, ವಲಯ ಮೇಲ್ವಿಚಾರಕ ಶ್ರೀನಿವಾಸ್, ಒಕ್ಕೂಟದ ವಲಯ ಅಧ್ಯಕ್ಷರಾದ ಶ್ರೀಮತಿ ಶಶಿಕಲಾ, ಸಮಿತಿಯ ಸದಸ್ಯರು, ಸೇವಾಪ್ರತಿನಿಧಿಗಳು, ಒಕ್ಕೂಟದ ಪದಾಧಿಕಾರಿಗಳು, ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)