ಉಪ್ಪುಂದ ; ನಿಸರ್ಗ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

0
172

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಉಪ್ಪುಂದ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ) ಬೈಂದೂರು ತಾಲೂಕಿನ ಉಪ್ಪುಂದ ವಲಯದ ಅಂಬಾಗಿಲು ಕಾರ್ಯಕ್ಷೇತ್ರದ ನಿಸರ್ಗ ಜ್ಞಾನ ವಿಕಾಸ ಕೇಂದ್ರದ ಒಂದನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಸದಸ್ಯ ಮೋಹನ್ ಚಂದ್ರರವರು ದೀಪ ಬೆಳಗಿಸಿ ಉದ್ಘಾಟಿಸಿದರು.

ಯೋಜನಾಧಿಕಾರಿ ಶಶಿರೇಖಾ ಬಿ ಜ್ಞಾನ ವಿಕಾಸ ಕಾರ್ಯಕ್ರಮದ ಬಗ್ಗೆ ಸದಸ್ಯರಿಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಉಪ್ಪುಂದ ಜನಜಾಗೃತಿ ವೇದಿಕೆಯ ಸದಸ್ಯ ಜಗನ್ನಾಥ, ವಲಯ ಒಕ್ಕೂಟದ ಅಧ್ಯಕ್ಷೆ ಶಶಿಕಲಾ, ಜ್ಞಾನವಿಕಾಸ ಸಮನ್ವಯಾಧಿಕಾರಿ ಗೀತಾ, ಸೇವಾ ಪ್ರತಿನಿಧಿ ಅಶ್ವಿನಿ ಮತ್ತು ಚಿತ್ರ ಜ್ಞಾನವಿಕಾಸ ಕೇಂದ್ರದ ಸದಸ್ಯರು ಹಾಗೂ ಸ್ವಸಹಾಯ ಸಂಘದ ಸದಸ್ಯರಯ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಆಟೋಟ ಸ್ಪರ್ಧೆಯಲ್ಲಿ ವಿಜೇತರಾದ ಸದಸ್ಯರಿಗೆ ಬಹುಮಾನ ವಿತರಣೆ ಮಾಡಲಾಯಿತು. ಹಾಗೂ ಜ್ಞಾನವಿಕಾಸ ಕೇಂದ್ರದ ಸದಸ್ಯರಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)