ಕಂಬದಕೋಣೆ : ಹೊಳೆಯಲ್ಲಿ ಮೃತಪಟ್ಟ ಇಬ್ಬರು ವಿದ್ಯಾರ್ಥಿಗಳ ಮನೆಗೆ ಶಾಸಕ ಬಿ.ಎಮ್.ಸುಕುಮಾರ ಶೆಟ್ಟಿ ಭೇಟಿ

0
177

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಬೈಂದೂರು ತಾಲೂಕಿನ ಕಂಬದಕೋಣೆ ಗ್ರಾಮದ ಎಡಮಾವಿನಹೊಳೆ ಬೊಬ್ಬರ್ಯ ಗುಂಡಿ ಹೊಳೆಯಲ್ಲಿ ಬಿದ್ದು ಮೃತಪಟ್ಟ ಇಬ್ಬರು ವಿದ್ಯಾರ್ಥಿಗಳ ಮನೆಗಳಿಗೆ ಮಂಗಳವಾರ ಬೈಂದೂರು ಶಾಸಕ ಬಿ.ಎಮ್.ಸುಕುಮಾರ ಶೆಟ್ಟಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಮೃತಪಟ್ಟ ಇಬ್ಬರು ವಿದ್ಯಾರ್ಥಿಗಳ ಕುಟುಂಬಗಳಿಗೆ ವೈಯಕ್ತಿಕವಾಗಿ ತಲಾ 50 ಸಾವಿರ ರೂ. ಪರಿಹಾರ ವಿತರಿಸಿದ ಶಾಸಕ ಸುಕುಮಾರ ಶೆಟ್ಟಿಯವರು ಮೃತಪಟ್ಟ ವಿದ್ಯಾರ್ಥಿಗಳ ಮನೆಯ ಇಬ್ಬರು ಹೆಣ್ಣು ಮಕ್ಕಳಿಗೆ ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಶಾಲೆಯಲ್ಲಿ ಪಿಯುಸಿ ವರೆಗೆ ಸಮವಸ್ತ್ರ, ಪುಸ್ತಕ ಸಹಿತ ಉಚಿತ ಶಿಕ್ಷಣ ನೀಡಲಾಗುವುದು ಎಂದು ಭರವಸೆ ನೀಡಿದರು.

ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ತಲಾ ರೂ. 5 ಲಕ್ಷ ಪರಿಹಾರ ನೀಡಲು ಜಿಲ್ಲಾಧಿಕಾರಿಗಳ ಮೂಲಕ ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಯಿತು. ಈ ಬಗ್ಗೆ ಸಂಸದ ಬಿ.ವೈ. ರಾಘವೇಂದ್ರ ಅವರು ಜಿಲ್ಲಾಧಿಕಾರಿಯವರಿಗೆ ಸೂಚಿಸಿದ್ದು, ಮುಖ್ಯಮಂತ್ರಿಗಳನ್ನು ವೈಯಕ್ತಿಕವಾಗಿ ಭೇಟಿ ಮಾಡಿ ಪರಿಹಾರ ನೀಡುವಂತೆ ಮನವಿ ಮಾಡಲಾಗುವುದು ಎಂದು ಹೇಳಿದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)