ವಂಡ್ಸೆ ಸ್ವಾವಲಂಬನಾ ಕೇಂದ್ರಕ್ಕೆ ಜಿ.ಪಂ.ಸಿಇಓ ಭೇಟಿ

0
150

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (2) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ವಂಡ್ಸೆಯಲ್ಲಿ ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊಲಿಗೆ, ಪೇಪರ್ ಬ್ಯಾಗ್ ತಯಾರಿ ತರಬೇತಿ ನೀಡುವ ‘ಸ್ವಾವಲಂಬನಾ’ ಕೇಂದ್ರಕ್ಕೆ ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರೀತಿ ಗೆಹ್ಲೋಟ್ ಅ.22ರಂದು ಭೇಟಿ ನೀಡಿದರು.

ವಂಡ್ಸೆ ಗ್ರಾಮ ಪಂಚಾಯತ್ ಅನುಷ್ಟಾನಿಸುತ್ತಿರುವ ಎಸ್.ಎಲ್.ಆರ್.ಎಂ. ಘಟಕದ ಅಧೀನದಲ್ಲಿ ಈ ಸಂಸ್ಥೆ ಕಾರ್ಯನಿರ್ವಹಿಸುತ್ತಿದೆ. ಇಲ್ಲಿ ಆಸಕ್ತ ಮಹಿಳೆಯರಿಗೆ ಹೊಲಿಗೆ ತರಬೇತಿ ನೀಡಲಾಗುತ್ತಿದೆ. ಪೇಪರ್, ಬಟ್ಟೆ ಬ್ಯಾಗ್ ತಯಾರಿ ತರಬೇತಿ ನೀಡಿ ಸ್ವ-ಉದ್ಯೋಗಕ್ಕೆ ಸಜ್ಜುಗೊಳಿಸಲಾಗುತ್ತಿದೆ. ಆರು ತಿಂಗಳ ಅವಧಿಯ ಉಚಿತ ತರಬೇತಿ ನೀಡಲಾಗುತ್ತಿದೆ.

ಸ್ವಾವಲಂಬನಾ ಕಾರ್ಯಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದ ಸಿಇಓ ಪ್ಲಾಸ್ಟಿಕ್‍ಗೆ ಪರ್ಯಯವಾಗಿ ತಯಾರಿಸಿದ ಬಟ್ಟೆ ಬ್ಯಾಗ್‍ಗಳನ್ನು ವೀಕ್ಷಿಸಿದರು.

ಈ ಸಂದರ್ಭದಲ್ಲಿ ಜಿ.ಪಂ.ಯೋಜನಾಧಿಕಾರಿ ಶ್ರೀನಿವಾಸ ರಾವ್, ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಡಾ|ನಾಗಭೂಷಣ ಉಡುಪ, ಗ್ರಾ.ಪಂ.ಅಧ್ಯಕ್ಷ ಉದಯ ಕುಮಾರ ಶೆಟ್ಟಿ, ಉಪಾಧ್ಯಕ್ಷೆ ಶಾರದಾ ರುದ್ರಯ್ಯ ಆಚಾರ್ಯ, ಮಾಜಿ ಅಧ್ಯಕ್ಷರಾದ ಶ್ರೀನಿವಾಸ ಪೂಜಾರಿ, ಪಿಡಿಓ ರೂಪಾ ಗೋಪಿ, ಕಾರ್ಯದರ್ಶಿ ಶಂಕರ ಆಚಾರ್ಯ, ಎಸ್.ಎಲ್.ಆರ್.ಎಂ. ಮೇಲ್ವಿಚಾರಕಿ ವಿಜಯಲಕ್ಷ್ಮೀ, ಸ್ವಾವಲಂಬನಾ ಕೇಂದ್ರದ ತರಬೇತಿದಾರರಾದ ಮಹಾಲಕ್ಷ್ಮೀ ಉಪಸ್ಥಿತರಿದ್ದರು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (2) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)