ವಂಡ್ಸೆ ಸ.ಮಾ.ಹಿ.ಪ್ರಾ.ಶಾಲೆ ಕನ್ನಡ ರಾಜ್ಯೋತ್ಸವ

0
73

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ವಂಡ್ಸೆಯ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೬೪ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.

ಎಸ್.ಡಿ.ಎಂ.ಸಿ ಅಧ್ಕಕ್ಷರಾದ ಮಂಜುನಾಥ ಎ.ಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿಗಳು ಕನ್ನಡದ ನಾಡಿನ ಹಿರಿಮೆಯ ಬಗ್ಗೆ ಮಾತನಾಡಿದರು. ಕರ್ನಾಟಕದ ಹಿರಿಮೆ, ಮಹತ್ವವನ್ನು ಬಿಂಬಿಸುವ ಗೀತೆಗಳನ್ನು ವಿದ್ಯಾರ್ಥಿಗಳು ಹಾಡಿ ರಂಜಿಸಿದರು.

ಮುಖ್ಯಶಿಕ್ಷಕ ಚಂದ್ರ ನಾಯ್ಕ ಎಚ್ ಮತ್ತು ಶಿಕ್ಷಕಿ ಚಿತ್ರಾ ರಾಜ್ಯೋತ್ಸವದ ಕುರಿತಾಗಿ ಕನ್ನಡ ರಾಜ್ಯೋತ್ಸವದ ಕುರಿತಾಗಿ ಮಾತನಾಡಿದರು. ಎಸ್.ಡಿ.ಎಂ.ಸಿ ಉಪಾಧ್ಯಕ್ಷೆ ಸುಮತಿ, ಮಹಮ್ಮದ್ ಫಾರುಕ್, ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ೨೦೦ ಮೀಟರ್ ಓಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿ ವಿವೇಕ್ ಅವರನ್ನು ಅಭಿನಂದಿಸಲಾಯಿತು. ಹಿರಿಯ ಶಿಕ್ಷಕಿ ಆಶಾ ಸ್ವಾಗತಿಸಿ,ಶಿಕ್ಷಕ ಸದಾಶಿವ ಕಾರ್ಯಕ್ರಮ ನಿರ್ವಹಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ರಾಜು ಎನ್ ವಂದಿಸಿದರು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)