ಮಾರಣಕಟ್ಟೆ: ಬೈಂದೂರು ವಲಯ ಮಟ್ಟದ ಎಸ್.ಡಿ.ಎಂ.ಸಿ ಸದಸ್ಯರಿಗೆ ತರಬೇತಿ ಕಾರ್ಯಗಾರ

0
110

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (3) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

 

ಕಟ್ಟ ಕಡೆಯ ಮಗುವಿಗೆ ಶಿಕ್ಷಣ ದೊರೆತಾಗ ಶಿಕ್ಷಣ ಹಕ್ಕು ಕಾಯ್ದೆಯ ಆಶಯ ಈಡೇರುತ್ತದೆ. ಸರ್ಕಾರಿ ಶಾಲೆಗಳ ವಿಚಾರದಲ್ಲಿ ಉಡುಪಿ ಜಿಲ್ಲೆಯಲ್ಲಿ ಎಸ್.ಡಿ.ಎಂ.ಸಿ ಶ್ಲಾಘನಾರ್ಹವಾದ ಕಾರ್ಯ ಮಾಡುತ್ತಿದೆ. ಎಸ್.ಡಿ.ಎಂ.ಸಿ ಜವಾಬ್ದಾರಿಯುತವಾಗಿ ಕೆಲಸ ನಿರ್ವಸುತ್ತಿರುವುದು, ಶಿಕ್ಷಣದಲ್ಲಿ ಉಡುಪಿ ಜಿಲ್ಲೆ ಮುಂಚೂಣಿಯಲ್ಲಿರುವುದು ಹೆಮ್ಮೆಯ ವಿಚಾರವಾಗಿದೆ ಎಂದು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಹೇಳಿದರು.
ಕರ್ನಾಟಕ ರಾಜ್ಯ ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆ, ಉಡುಪಿ ಜಿಲ್ಲೆ, ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿ ಬೈಂದೂರು ವಲಯ, ಸಾರ್ವಜನಿಕ ಶಿಕ್ಷಣ ಇಲಾಖೆ ಬೈಂದೂರು ವಲಯ, ಗ್ರಾಮ ಪಂಚಾಯತ್ ಚಿತ್ತೂರು,ತಾಲೂಕು ಶಿಕ್ಷಣ ಸಂಪನ್ಮೂಲ ಕೇಂದ್ರ ಕುಂದಾಪುರ, ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನ ಮಾರಣಕಟ್ಟೆ ಇವರ ಸಹಯೋಗದೊಂದಿಗೆ ಮಾರಣಕಟ್ಟೆಯ ಮಾರಣಕಟ್ಟೆಯ ಶ್ರೀ ಬ್ರಹ್ಮಲಿಂಗೇಶ್ವರ ಕಲ್ಯಾಣ ಮಂಟಪದಲ್ಲಿ ನಡೆದ ಬೈಂದೂರು ವಲಯ ಮಟ್ಟದ ಎಸ್.ಡಿ.ಎಂ.ಸಿ ಸದಸ್ಯರಿಗೆ ತರಬೇತಿ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದರು.

ಕಾರ್ಯಗಾರದ ಅಧ್ಯಕ್ಷತೆಯನ್ನು ಶ್ರೀ ಕ್ಷೇತ್ರ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ವಂಡಬಳ್ಳಿ ಜಯರಾಮ ಶೆಟ್ಟಿ ವಹಿಸಿದ್ದರು.

ಮಾರಣಕಟ್ಟೆ ದೇವಳದ ಆಡಳಿತ ಮೊಕ್ತೇಸರ ಸದಾಶಿವ ಶೆಟ್ಟಿ, ಶ್ರೀ ಬ್ರಹ್ಮಲಿಂಗೇಶ್ವರ ಕಲ್ಯಾಣ ಮಂಟಪದ ಮುಖ್ಯಸ್ಥರಾದ ರಾಮಚಂದ್ರ ಮಂಜರು, ತಾಲೂಕು ಪಂಚಾಯತ್ ಸದಸ್ಯ ಉದಯ ಜಿ.ಪೂಜಾರಿ, ಚಿತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷ ಸಂತೋಷ ಮಡಿವಾಳ, ಪರಿಸರವಾದಿ, ಸಾಮಾಜಿಕ ಚಿಂತಕ ಡಾ|ಅತುಲ್ ಕುಮಾರ್ ಶೆಟ್ಟಿ, ಶಿಕ್ಷಣ ಸಂಯೋಜಕ ನಿತ್ಯಾನಂದ ಶೆಟ್ಟಿ, ಬೈಂದೂರು ವಲಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿಶ್ವನಾಥ ಪೂಜಾರಿ, ಬೈಂದೂರು ವಲಯ ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಯು.ಅವನೀಶ್ ಹೊಳ್ಳ,ೆÊಂದೂರು ವಲಯ ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಉಸ್ತುವಾರಿ ದಿವಾಕರ ಆಚಾರ್ಯ, ಚಿತ್ತೂರು ಪ್ರೌಢಶಾಲೆ ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿ ಕಾರ್ಯಾಧ್ಯಕ್ಷ ರವಿರಾಜ ಶೆಟ್ಟಿ, ಚಿತ್ತೂರು ಸ.ಹಿ.ಪ್ರಾ.ಶಾಲೆ ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿ ಮಾಜಿ ಅಧ್ಯಕ್ಷ ಶಂಕರ ಭಟ್, ಚಿತ್ತೂರು ಪಂಚಾಯತ್ ಅಭಿವೃದ್ದಿ ಅಧಿಕಾರಿ ಸಂದೇಶ ಶೆಟ್ಟಿ, ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆ ಬೆಳ್ತಂಗಡಿ ಅಧ್ಯಕ್ಷ ರಮೇಶ ಶೆಟ್ಟಿ, ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆ ಜಿಲ್ಲಾ ಕಾರ್ಯದರ್ಶಿ ಸೀಮಾ, ಚಿತ್ತೂರು ಸ.ಹಿ.ಪ್ರಾ.ಶಾಲೆಯ ವಿದ್ಯಾರ್ಥಿಗಳಾದ ರಿಜ್ಹಾ, ದಿಶಾ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಬೈಂದೂರು ವಲಯದ ಸಾಧಕ ಶಿಕ್ಷಕರಾದ ರಾಜಶೇಖರ ಎಮ್ ತಾಳಿಕೋಟೆ, ಆನಂದ ಶೆಟ್ಟಿ, ಮುಖ್ಯೋಪಾಧ್ಯಾಯರು ಸ.ಹಿ.ಪ್ರಾ.ಶಾಲೆ ಚಿತ್ತೂರು, ರವೀಂದ್ರ ಶೆಟ್ಟಿ, ಶಿಕ್ಷಕರು ಸ.ಕಿ.ಪ್ರಾ.ಶಾಲೆ ಯೋಜನಾನಗರ ಬೈಂದೂರು , ದಯಾನಂದ ಇವರನ್ನು ಸನ್ಮಾನಿಸಲಾಯಿತು. ಬೈಂದೂರು ಶೈಕ್ಷಣಿಕ ವಲಯದ ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿಗಳ ಅಧ್ಯಕ್ಷರಾಗಿ ಆಯ್ಕೆಯಾದ ದಿವಾಕರ ಆಚಾರ್ಯರನ್ನು ಶಾಸಕರು ಅಭಿನಂದಿಸಿದರು.

ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆ ಉಡುಪಿ ಜಿಲ್ಲೆ ಅಧ್ಯಕ್ಷ ಅಬ್ದುಲ್ ಸಲಾಂ ಚಿತ್ತೂರು ಪ್ರಾಸ್ಯಾವಿಕ ಮಾತುಗಳನ್ನಾಡಿದರು. ಅಧಿವೇಶನದಲ್ಲಿ ‘ಸರಕಾರಿ ಶಾಲೆ ಉಳಿಯಲಿ ನೆರೆಹೊರೆಯ ಸಮಾನ ಶಾಲೆಯಾಗಿ ಬೆಳೆಯಲಿ’ ಎನ್ನುವ ಕುರಿತು ವಿಷಯ ಮಂಡನೆಯಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಎಸ್.ವಿ.ನಾಗರಾಜ್ ಭಾಗವಹಿಸಿದ್ದರು.
ದಿವಾಕರ ಆಚಾರ್ಯ ಸ್ವಾಗತಿಸಿ, ಮಾಲತಿ ವಂದಿಸಿದರು.ಶಿಕ್ಷಕ ಗುರುಪ್ರಸಾದ್ ಕಾರ್ಯಕ್ರಮ ನಿರ್ವಹಿಸಿದರು.

ನಿರೀಕ್ಷೆಗೂ ಮೀರಿ ಬಂದ ಸದಸ್ಯರು : ಬೈಂದೂರು ವಲಯದ ಈ ಸಮಾವೇಶ ನಿರೀಕ್ಷೆಗೂ ಮೀರ ಯಶಸ್ಸು ಕಂಡಿತು. ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿಯ ಸದಸ್ಯರು ಸಂಘಟಕರು ನಿರೀಕ್ಷೆ ಮಾಡಿದ್ದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಬಂದು ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಸರ್ಕಾರಿ ಶಾಲೆಗಳ ಉಳಿಸುವಿಕೆಯಲ್ಲಿ ಶಾಲಾಭಿವೃದ್ದಿ ಸಮಿತಿಗಳ ಆಸಕ್ತಿ, ಮತ್ತು ಎಸ್.ಡಿ.ಎಂ.ಸಿ ಹೊಣೆ, ಕರ್ತವ್ಯ, ಜವಾಬ್ದಾರಿಗಳನ್ನು ತಿಳಿದುಕೊಳ್ಳಲು ಇದು ವೇದಿಕೆಯಾಯಿತು. ಬೈಂದೂರು ವಲಯದ ೧೮೩ ಸರ್ಕಾರಿ ಶಾಲೆಗಳ ೭೩೦ ಕ್ಕೂ ಹೆಚ್ಚು ಎಸ್.ಡಿ.ಎಂ.ಸಿ ಸದಸ್ಯರು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (3) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)