ಮನೆ ಕಟ್ಟುವವರಿಗೆ ಗುಡ್ ನ್ಯೂಸ್: ಲೋಡ್ ಮರಳಿಗೆ 6500 ರೂಪಾಯಿ

0
190

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (4) ಸಮ್ಮತ (3) ಅಸಮ್ಮತ (3) ಖಂಡಿಸುವೆ (2) ಅಭಿಪ್ರಾಯವಿಲ್ಲ (0)

ಬಡವರಿಗೆ ಕಡಿಮೆ ದರದಲ್ಲಿ ಮರಳು ದೊರಕಿಸಿಕೊಡಬೇಕೆಂದು ಎಲ್ಲಾ ಶಾಸಕರು ಮಾಡಿದ ಪ್ರಯತ್ನಕ್ಕೆ ಫಲ ಸಿಕ್ಕಿದ್ದು ಮರಳು ದರ ಎಲ್ಲರಿಗೂ ತಿಳಿಯುವಂತೆ ಪ್ರಚಾರ ಕೈಗೊಳ್ಳಬೇಕು ಎಂದು ಬೈಂದೂರು ಶಾಸಕ ಬಿ.ಎನ್. ಸುಕುಮಾರ ಶೆಟ್ಟಿ ತಿಳಿಸಿದ್ದಾರೆ.

ಕಂಡ್ಲೂರು ಪ್ರದೇಶದಲ್ಲಿ ಮರಳು ಗಣಿಗಾರಿಕೆಗೆ ಸರ್ಕಾರ ಅವಕಾಶ ನೀಡಿದೆ. ಗುತ್ತಿಗೆದಾರರು ಒಂದು ಲೋಡ್ ಮರಳಿಗೆ 6500 ರೂಪಾಯಿ ಮಾತ್ರ ಪಡೆಯಬೇಕು ಎಂದು ತಿಳಿಸಿದ್ದಾರೆ.

ಕುಂದಾಪುರದ ತಾಲೂಕು ಪಂಚಾಯಿತಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 20 ಕಿಲೋಮೀಟರ್ ವರೆಗೆ ದೊಡ್ಡ ಲಾರಿಗೆ 2000 ರೂಪಾಯಿ, ನಂತರದ ಪ್ರತಿ ಕಿಲೋಮೀಟರ್ ಗೆ 40 ರೂಪಾಯಿ ನಿಗದಿಪಡಿಸಲಾಗಿದೆ. ಸಣ್ಣ ಲಾರಿಗಳಿಗೆ 20 ಕಿಲೋಮೀಟರ್ ವರೆಗೆ 1500 ರೂಪಾಯಿ., ನಂತರದ ಪ್ರತಿ ಕಿಲೋಮೀಟರ್ ಗೆ 35 ರೂಪಾಯಿ ದರ ಪಡೆಯಬೇಕು. ಅಧಿಕ ದರ ಪಡೆಯುವ ಗುತ್ತಿಗೆದಾರರ ವಿರುದ್ಧ ಜಿಲ್ಲಾಡಳಿತ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.

Dailyhunt
ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (4) ಸಮ್ಮತ (3) ಅಸಮ್ಮತ (3) ಖಂಡಿಸುವೆ (2) ಅಭಿಪ್ರಾಯವಿಲ್ಲ (0)