ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹೈನುಗಾರಿಕೆ ತರಬೇತಿ ಕಾರ್ಯಗಾರ

0
104

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

 

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ) ಬೈಂದೂರ್ ತಾಲೂಕ್ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಕೊಲ್ಲೂರು ವಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಕೃಷಿ ಅಭಿವೃದ್ಧಿ ಕಾರ್ಯಕ್ರಮದಡಿ ಹೈನುಗಾರಿಕೆ ತರಬೇತಿ ಕಾರ್ಯಗಾರವನ್ನು ಜಡ್ಕಲ್ ಕಾರ್ಯಕ್ಷೇತ್ರದ ನರಸಿಂಹಶೆಟ್ಟಿ ಇವರ ಮನೆಯಲ್ಲಿ ನಡೆಯಿತು.

 ಕಾರ್ಯಕ್ರಮವನ್ನು ವಲಯ ಒಕ್ಕೂಟದ ಅಧ್ಯಕ್ಷ ಮಂಜುನಾಥ ಪೂಜಾರಿ ಉದ್ಘಾಟಿಸಿ ಮಾತನಾಡಿದ ಅವರು ಯೋಜನೆಯ ಹಲವು ಕಾರ್ಯಕ್ರಮಳನ್ನು ಹಮ್ಮಿಕೊಳ್ಳುತ್ತಿದೆ ಹೈನುಗಾರಿಕೆಯನ್ನು ಶ್ರದ್ಧೆಯಿಂದ ನಿರ್ವಹಿಸಿದರೆ ಗೋಮಾತೆ ನಮ್ಮ ಆರೋಗ್ಯ ಮತ್ತು ಸಂಪತ್ತನ್ನು ಹೆಚ್ಚಿಸುತ್ತದೆ ಗೋಮಾತೆ ಒಂದು ಕಲ್ಪವೃಕ್ಷ ಇದರಿಂದ ಆಗುವ ಅನೇಕ ಉಪಯೋಗಳ ಕುರಿತು ತಿಳಿಸಿದರು ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ ದೇವದಾಸ್ ಹೈನುಗಾರಿಕಾ ವಿಷಯ ತಜ್ಞರು ಜಡ್ಕಲ್ ಇವರು ಹೈನುಗಾರಿಕೆಯಲ್ಲಿ ಹಸುಗಳ ಆಯ್ಕೆ ನಿರ್ವಹಣ ಕೃತಕ ಗರ್ಭಧಾರಣೆ ವಿಧಾನ ಹಟ್ಟಿ ರಚನೆ ಸುಚಿತ್ವ ಆಹಾರ ನೀಡುವ ವಿಧಾನ ಮೇವಿನ ಬೆಳೆಗಳು ಕರು ಹಾಕುವ ಸಂದರ್ಭದಲ್ಲಿ ಗಮನಿಸಬೇಕಾದ ಅಂಶಗಳ ಬಗ್ಗೆ ಮಾಹಿತಿ ನೀಡಿದರು.

ಕೃಷಿ ಅಧಿಕಾರಿ ಮಂಜುನಾಥ್ ಯೋಜನೆಯಿಂದ ಸಿಗುವ ಸೌಲಭ್ಯ ಹಾಗು ತರಬೇತಿ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರಾದ ಭಾಸ್ಕರ ನಾಯಕ್ ಹಾಗು ಪದಾಧಿಕಾರಿಗಳು ಉಪಸ್ಥಿತರಿದ್ದರು ವಲಯ ಮೇಲ್ವಿಚಾರಕ ರವಿಶಂಕರ್ ನಿರೂಪಿಸಿದರು ಸೇವಾ ಪ್ರತಿನಿಧಿ ಜ್ಯೋತಿ ಸ್ವಾಗತಿಸಿದರು ನಿರ್ಮಲ ವಂದಿಸಿದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)