ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ

0
133

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಕುಂದಾಪುರ: ಮಾಧ್ಯಮ ಇಂದು ವೃತ್ತಿಯಾಗಿ ಉಳಿದುಕೊಂಡಿಲ್ಲ. ಅದೊಂದು ಉದ್ಯಮವಾಗಿ ಬೆಳೆದು ನಿಂತಿದೆ. ಮಾಧ್ಯಮವೆಂದರೆ ಬಂಡವಾಳ ಹೂಡಿ ಲಾಭ ಪಡೆಯುವುದಲ್ಲ. ನಮ್ಮ ಇವತ್ತಿನ ಎಲ್ಲಾ ಸಮಸ್ಯೆಗಳ ಮೂಲ ಇರುವುದು ಇಲ್ಲೇ. ವೃತ್ತಿ ಉದ್ಯಮವಾಗುತ್ತಿರುವಾಗ ಅದರಿಂದಾಗುವ ದುಷ್ಪರಿಣಾಮಗಳನ್ನು ಆ ವೃತ್ತಿಯಲ್ಲಿ ಇದ್ದವನು ಎದುರಿಸಬೇಕಾಗುತ್ತದೆ. ಕವಲುದಾರಿಯಲ್ಲಿ ಪತ್ರಕರ್ತ ಅಂದಾಗ ನನಗೆ ಪತ್ರಕರ್ತ ದಿಕ್ಕೆಟ್ಟು ನಿಂತಿದ್ದಾನೆ ಅನಿಸುತ್ತಿದೆ. ನಾನು ಮೂವತ್ತು ವರ್ಷಗಳ ಹಿಂದೆ ವೃತ್ತಿಯನ್ನು ಪ್ರವೇಶಿಸುವಾಗ ಇದ್ದ ಮಾಧ್ಯಮ ಕ್ಷೇತ್ರಕ್ಕೂ ಇವತ್ತು ನಾನು ನಿಂತು ನೋಡುವ ಮಾಧ್ಯಮ ಕ್ಷೇತ್ರಕ್ಕೂ ಶತಮಾನಗಳ ಅಂತರ ಎದ್ದು ಕಾಣುತ್ತಿದೆ ಎಂದು ಪತ್ರಕರ್ತ, ಚಿಂತಕ ದಿನೇಶ್ ಅಮೀನ್ ಮಟ್ಟು ನುಡಿದರು.

ಅವರು ಮಂಗಳವಾರ ಸಂಜೆ ಕುಂದಾಪುರ ಜ್ಯೂನಿಯರ್ ಕಾಲೇಜಿನ ಕಲಾಮಂದಿರದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಪ್ರದಾನ ಕಾರ್ಯಕ್ರಮದಲ್ಲಿ “ಕವಲು ದಾರಿಯಲ್ಲಿ ಪತ್ರಕರ್ತ” ವಿಷಯದಲ್ಲಿ ದಿಕ್ಸೂಚಿ ಭಾಷಣ ಮಾಡಿದರು.

ನೂತನ ಪದಾಧಿಕಾರಿಗಳಿಗೆ ಪ್ರತಿಜಾÐವಿಧಿಯನ್ನು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗಣೇಶ್ ಪ್ರಸಾದ್ ಪಾಂಡೇಲು ಬೋಧಿಸಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಶಸ್ತಿ ಪುರಸ್ಕøತ ಪತ್ರಕರ್ತ ಲಕ್ಷ್ಮೀ ಮಚ್ಚಿನ ಹಾಗೂ ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ಛಾಯಪತ್ರಕರ್ತ ಸಂತೋಷ್ ಕುಂದೇಶ್ವರ ಅವರನ್ನು ಸನ್ಮಾನಿಸಲಾಯಿತು.

ಕುಂದಾಪುರ ತಾಲೂಕು ಕಾರ್ಯನಿತರತ ಪತ್ರಕರ್ತರ ಸಂಘದ ಅಧ್ಯಕ್ಷ ಶಶಿಧರ ಹೆಮ್ಮಾಡಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕುಂದಾಪುರ ಎಎಸ್‍ಪಿ ಹರಿರಾಮ್ ಶಂಕರ್,  

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಸಂತೋಷ್ ಸರಳೆಬೆಟ್ಟು, ಜಿಲ್ಲಾ ಉಪಾಧ್ಯಕ್ಷ ರಾಜೇಶ್ ಕೆಸಿ, ಬೈಂದೂರು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಜನಾರ್ದನ್ ಎಸ್ ಮರವಂತೆ, ಬ್ರಹ್ಮಾವರ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಚಿತ್ತೂರು ಪ್ರಭಾಕರ ಆಚಾರ್ಯ, ತಾಲೂಕು ಕಾರ್ಯದರ್ಶಿ ನಾಗರಾಜ ರಾಯಪ್ಪನಮಠ, ಕೋಶಾಧಿಕಾರಿ ಸತೀಶ್ ಆಚಾರ್ ಉಪಸ್ಥಿತರಿದ್ದರು.

ಹಿರಿಯ ಪತ್ರಕರ್ತ ರಾಮಕೃಷ್ಣ ಹೇರ್ಳೆ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪತ್ರಕರ್ತ ರಾಘವೇಂದ್ರ ಪೈ ಸ್ವಾಗತಿಸಿದರು. ಪತ್ರಕರ್ತ ಶ್ರೀಕಾಂತ ಹೆಮ್ಮಾಡಿ ಧನ್ಯವಾದವಿತ್ತರು. ಪತ್ರಕರ್ತ ಜಯಶೇಖರ್ ಮಡಪ್ಪಾಡಿ ಕಾರ್ಯಕ್ರಮ ನಿರೂಪಿಸಿದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)