ಉಪ್ಪುಂದ ದುರ್ಗಾಪರಮೇಶ್ವರಿ ದೇಗುಲದ ಜಾತೃ ಮಹೋತ್ಸವದ ಪೂರ್ವಭಾವಿ ಸಭೆ

0
568

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಉಪ್ಪುಂದ. ನ. 16 : ಉಪ್ಪುಂದ ದುರ್ಗಾಪರಮೇಶ್ವರಿ ದೇಗುಲದ ಜಾತ್ರೆಯ ದೊಡ್ಡ ಜಾತ್ರೆಯಾಗಿದ್ದು ಸಾವಿರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಭಾಗವಹಿಸುತ್ತಾರೆ. ಯಾರಿಗೂ ತೊಂದರೆಯಾಗದಂತೆ ಮುಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಹೇಳಿದರು.

ಅವರು ಉಪ್ಪುಂದ ದುರ್ಗಾಪರಮೇಶ್ವರಿ ಸಭಾಭವನದಲ್ಲಿ ನಡೆದ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಜಾತ್ರೆಯ ಮೂರು ದಿನ ಭಕ್ತಾಧಿಗಳಿಗೆ ಊಟದ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದ ಶಾಸಕರು ಒಂದು ದಿನದ ಊಟದ ಖರ್ಚನ್ನು ನಾನು ನೀಡುತ್ತೇನೆ. ಇನ್ನೂ ಎರಡು ದಿನದ ಊಟದ ವ್ಯವಸ್ಥೆ ದಾನಿಗಳಿಂದ ಭರಿಸುವಂತೆ ವಿನಂತಿಸಿದರು. ಜಾತ್ರೆಯಲ್ಲಿ ಪಾಲ್ಗೊಳ್ಳವ ಜನರಿಗೆ ಹಾಗೂ ವ್ಯಾಪಾರಿಗಳಿಗೆ ಅನುಕೂಲವಾಗಲು ಶೌಚಾಲಯ ನಿರ್ಮಿಸಲು ಸೂಚಿಸಿದರು.

ಜಾತ್ರೆಯ ಸಿದ್ಧತೆಯಲ್ಲಿ ತೊಡಗಿಸಿಕೊಳ್ಳುವ ಕೆಲಸಗಾರರ ವೇತನ ಕಡಿಮೆಯಾಗಿರುವ ಕುರಿತು ಶಾಸಕರ ಗಮನಕ್ಕೆ ತಂದಾಗ ಎಲ್ಲರಿಗೂ ಗರಿಷ್ಠ ಪ್ರಮಾಣದಲ್ಲಿ ನಿಗದಿತ ವೇತನ ನೀಡಬೇಕು ಎಂದು ಸೂಚಿಸಿದರು.ಇದರಲ್ಲಿ ತಾರತಮ್ಯ ಮಾಡಿದರೆ ಕ್ರಮಕೈಗೊಳ್ಳಲಾಗುವುದು ಎಂದರು. ಈ ರೀತಿಯ ಯಾವುದೇ ಲೋಪಗಳು ಆಗದಂತೆ ನೋಡಿಕೊಳ್ಳಲು ತಹಶೀಲ್ದಾರಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಜಿ.ಪಂ ಸದಸ್ಯ ಸುರೇಶ ಬಟವಾಡಿ, ಗೌರಿ ದೇವಾಡಿಗ, ಬೈಂದೂರು ಪೊಲೀಸ್ ಇನ್ಸಪೆಕ್ಟರ್ ಸುರೇಶ್ ನಾಯ್ಕ, ಬೈಂದೂರು ಆಸ್ಪತ್ರೆಯ ಆರೋಗ್ಯಾಧಿಕಾರಿ ಪ್ರೇಮಾನಂದ, ತಶೀಲ್ದಾರ ಬಸಪ್ಪ ಪೂಜಾರಿ, ಗ್ರಾ.ಪಂ ಉಪಾಧ್ಯಕ್ಷೆ ಸಿಂಗಾರಿ ಶೆಡ್ತಿ, ಮಾಜಿ ದರ್ಮದರ್ಶಿ ಜಯರಾಮ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)