ಕೊಲ್ಲೂರು ಮೂಕಾಂಬಿಕೆ ಭಕ್ತರಿಗೆ ಪೊಲೀಸರ ಮನವಿ ಏನು?

0
203

ಹೆಚ್ಚಿನ ಓದುಗರು ಈ ಸುದ್ದಿಯನ್ನು ಖಂಡಿಸುವೆ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (1) ಖಂಡಿಸುವೆ (3) ಅಭಿಪ್ರಾಯವಿಲ್ಲ (0)

ಉಡುಪಿ, ನವೆಂಬರ್ 26 : ಕೊಲ್ಲೂರು ಮೂಕಾಂಬಿಕ ದೇವಾಲಯದ ಹೆಸರಿನಲ್ಲಿ ನಕಲಿ ವೆಬ್‌ಸೈಟ್‌ಅನ್ನು ದುಷ್ಕರ್ಮಿಗಳು ಆರಂಭಿಸಿದ್ದಾರೆ. ಅದನ್ನು ಬಳಕೆ ಮಾಡಿ, ಹಣ ಪಾವತಿ ಮಾಡಬೇಡಿ ಎಂದು ಪೊಲೀಸರು ಭಕ್ತರಲ್ಲಿ ಮನವಿ ಮಾಡಿದ್ದಾರೆ.

ದೇವಾಲಯದ ಹೆಸರಿನಲ್ಲಿ ನಕಲಿ ವೆಬ್ ಸೈಟ್ ರೂಪಿಸಿ ಭಕ್ತರಿಂದ ಹಣ ಸಂಗ್ರಹ ಮಾಡಿದ ಬಗ್ಗೆ ದೂರುಗಳು ಬಂದಿವೆ. ಇಂತಹ ಅನಧಿಕೃತ ವೆಬ್‌ಸೈಟ್ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ಪೊಲೀಸರು ಭಕ್ತರಿಗೆ ಸೂಚನೆ ನೀಡಿದ್ದಾರೆ.

www.mookambika.co.in ನಕಲಿ ವೆಬ್ ಸೈಟ್ ಆಗಿದೆ. ಇದರ ಮೂಲಕ ಭಕ್ತರು ಹಣವನ್ನು ಪಾವತಿ ಮಾಡಿದ್ದಾರೆ. ಈಗಾಗಲೇ ಪೊಲೀಸ್ ಠಾಣೆಯಲ್ಲಿ ಈ ಕುರಿತು ದೂರು ದಾಖಲಾಗಿದೆ. ಭಕ್ತರು ಇದನ್ನು ಬಳಸಬೇಡಿ ಎಂದು ಕರೆ ನಿಡಲಾಗಿದೆ.

www.kollurmookambika.org ದೇವಾಲಯದ ಅಧಿಕೃತ ವೆಬ್ ಸೈಟ್ ಆಗಿದೆ. ಭಕ್ತರು ಈ ವೆಬ್‌ ಸೈಟ್‌ ಮಾತ್ರ ಬಳಸಬೇಕು. ದೇವಾಲಯದ ಮಾಹಿತಿ, ಎಲ್ಲಾ ಸೇವೆಗಳ ಮಾಹಿತಿ ಈ ವೆಬ್‌ಸೈಟ್‌ನಲ್ಲಿ ಲಭ್ಯವಿದೆ ಎಂದು ಪೊಲೀಸರು ಹೇಳಿದ್ದಾರೆ.

ಉಡುಪಿ ಜಿಲ್ಲೆಯಲ್ಲಿರುವ ಕೊಲ್ಲೂರು ಮೂಕಾಂಬಿಕ ದೇವಾಲಯಕ್ಕೆ ಕರ್ನಾಟಕ ಮಾತ್ರವಲ್ಲ ಪಕ್ಕದ ಕೇರಳ ರಾಜ್ಯದಲ್ಲಿಯೂ ಅಪಾರ ಭಕ್ತರಿದ್ದಾರೆ. ಪ್ರತಿನಿತ್ಯ ಸಾವಿರಾರು ಜನರು ದೇವಾಲಯಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆಯುತ್ತಾರೆ.

 

ಹೆಚ್ಚಿನ ಓದುಗರು ಈ ಸುದ್ದಿಯನ್ನು ಖಂಡಿಸುವೆ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (1) ಖಂಡಿಸುವೆ (3) ಅಭಿಪ್ರಾಯವಿಲ್ಲ (0)