ಹೆಂಡತಿ ಮತ್ತು ಅಪ್ರಾಪ್ತ ಮಕ್ಕಳಿಗೆ ವಿಷ ಹಾಕಿ ಹತ್ಯೆ ಮಾಡಿ ಆತ್ಯಹತ್ಯೆ ಮಾಡಿಕೊಂಡ ಪತಿ

0
113

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಕುಂದಾಪುರ : ನಿದ್ದೆಯಲ್ಲಿದ್ದ ಪತ್ನಿ ಹಾಗೂ ಇಬ್ಬರು ಅಪ್ರಾಪ್ತ ಮಕ್ಕಳನ್ನು ಕೊಂದ ಪತಿ ನೇಣು ಹಾಕಿಕೊಂಡ ಅಮಾನುಷ ಘಟನೆ ಹೆಬ್ರಿ ತಾಲೂಕಿನ ಬೆಳ್ವೆ ಗ್ರಾಮದ ಸೆಟ್ ವಳ್ಳಿ ಎಂಬಲ್ಲಿ ಬುಧವಾರ ಮುಂಜಾನೆ ನಡೆದಿದ್ದು ಸಂಜೆ ಬೆಳಕಿಗೆ ಬಂದಿದೆ.

ಇಲ್ಲಿನ ನಿವಾಸಿ ಕೃಷ್ಣ ಅಲ್ಸೆ ಎಂಬುವರ ಮಗ ಸೂರ್ಯನಾರಾಯಣ ಭಟ್ (50) ಎಂಬಾತ ಪತ್ನಿ, ಮಕ್ಕಳನ್ನು ಹತ್ಯೆ ಮಾಡಿ ಆತ್ಮಹತ್ಯೆ ಮಾಡಿಕೊಂಡರೆ, ಆತನ ಪತ್ನಿ ಮಾನಸಿ (40) ಸುಧೀಂದ್ರ (14) ಸುಧೀಶ್ (8) ಎಂಬುವರೇ ಅಮಾನುಷವಾಗಿ ಹತ್ಯೆಯಾದವರು.

ಕೃಷಿಕರಾಗಿದ್ದ ಸೂರ್ಯನಾರಾಯಣ ಭಟ್ ಬಿಡುವಿನ ವೇಳೆಯಲ್ಲಿ ಅಡುಗೆ ಕೆಲಸಕ್ಕೆ ಹೋಗುತ್ತಿದ್ದರು. ಬುಧವಾರ ಸಂಜೆ ಅಡುಗೆ ಕೆಲಸಕ್ಕೆ ಹೋಗುವುದಾಗಿ ಒಪ್ಪಿಕೊಂಡಿದ್ದರು. ಆದರೆ ಹೋಗದೇ ಇದ್ದಾಗ ಅಡುಗೆಯವರು ಅವರ ಮೊಬೈಲ್ ಗೆ ಕರೆ ಮಾಡಿದಾಗ ಸ್ವಿಚ್ ಆಪ್ ಬಂದಿದ್ದು, ಪತ್ನಿಯ ಫೊನ್ ಸ್ವಿಚ್ ಆಪ್ ಆಗಿತ್ತು ಬಳಿಕ ಅವರ ಅಣ್ಣನಿಗೆ ಕರೆ ಮಾಡಿದ್ದು ಸಹೋದರ ಮನೆಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

ಮಾನಸಿಕವಾಗಿ ಅಸ್ವಸ್ಥರಾಗಿದ್ದ ಸೂರ್ಯನಾರಾಯಣ ಭಟ್, ಮೊದಲಿನಿಂದಲೂ ಮುಂಗೋಪಿಯಾಗಿದ್ದರು ಎಂದು ಸ್ಥಳೀಯರು ಹೇಳಿದ್ದಾರೆ. ಪ್ರತೀ ದಿನ ಬೆಳಿಗ್ಗೆ ಸಮೀಪದ ಅಂಗಡಿಯೊಂದಕ್ಜೆ ಹೋಗಿ ಅರ್ಧ ಗಂಟೆ ಪತ್ರಿಕೆ ಓದಿ ಬರುತ್ತಿದ್ದ ಸೂರ್ಯನಾರಾಯಣ, ಕಳೆದ ಒಂದು ವಾರದಿಂದ ಅಂಗಡಿಗೆ ಹೋಗಿರಲಿಲ್ಲ ಎನ್ನಲಾಗಿದೆ. ಇದರಿಂದ ಸೂರ್ಯನಾರಾಯಣ ಪೂರ್ವಸಿದ್ಧತೆ ಮಾಡಿಕೊಂಡಿದ್ದರೆ ಎನ್ನುವ ಶಂಕೆ ವ್ಯಕ್ತವಾಗಿದೆ.

ಬುಧವಾರ ನಸುಕಿನಲ್ಲಿಯೇ ಘಟನೆ ನಡೆದಿರಬಹುದು ಎಂದು ಅಂದಾಜಿಸಲಾಗಿದ್ದು, ಪತ್ನಿ ಹಾಗೂ ಮಕ್ಕಳಿಗೆ ವಿಷ ನೀಡಿದ ಬಳಿಕ ತಲೆಗೆ ಹರಿತವಾದ ಆಯುಧದಿಂದ ಚುಚ್ಚಿ ಕೊಲ್ಲಲಾಗಿದೆ ಎಂದು ಶಂಕಿಸಲಾಗಿದ್ದು ತಲೆಯಲ್ಲಿ ಚುಚ್ಚಿ ಗಾಯಗಳಿವೆ. ಬಳಿಕ ಈತ ಮನೆಯೊಳಗೆ ಚಿಕ ಹಾಕಿಕೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೌಟುಂಬಿಕವಾಗಿ ಚೆನ್ನಾಗಿಯೇ ಇದ್ದರು ಎನ್ನಲಾಗಿದ್ದು, ಆರ್ಥಿಕವಾಗಿ ಸದೃಢರಾಗಿದ್ದರು. ಮಗ ಸುಧೀಂದ್ರ ಹೆಬ್ರಿಯ ಎಸ್ ಆರ್ ಎಸ್ ಶಾಲೆಯಲ್ಲಿ ಎಂಟನೇ ತರಗತಿ ಹಾಗೂ ಸುಧೀಶ್ ಅದೇ ಶಾಲೆಯಲ್ಲಿ ನಾಲ್ಕನೇ ತರಗತಿ ಓದುತ್ತಿದ್ದ. ಇವರ ಸಹೋದರ ಒಬ್ಬ ಬೆಂಗಳೂರಿನಲ್ಲಿದ್ದು, ಮತ್ತೊಬ್ಬ ಊರಿನಲ್ಲಿಯೇ ಕೃಷಿ ಕೆಲಸ ಮಾಡಿಕೊಂಡಿದ್ದಾರೆ. ಸಹೋದರಿ ಶಿಕ್ಷಕಿಯಾಗಿದ್ದಾರೆ.

ಘಟನಾ ಸ್ಥಳಕ್ಕೆ ಎಸ್ಪಿ ನಿಶಾ ಜೇಮ್ಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಣಿಪಾಲದ ವಿಧಿ ವಿಜ್ಞಾನ ತಜ್ಞರು, ಶ್ವಾನ ದಳ, ಬೆರಳಚ್ಚು ತಜ್ಞರು ಪರೀಕ್ಷಿಸಿದ ಬಳಿಕ ರಾತ್ರಿ ಹನ್ನೆರಡು ಗಂಟೆ ಸುಮಾರಿಗೆ ಮೃತದೇಹಗಳನ್ನು ಮಣಿಪಾಲ ಆಸ್ಪತ್ರೆಗೆ ಸಾಗಿಸಲಾಗಿದೆ. ಶಂಕರನಾರಾಯಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)