ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿಗೆ ಕ್ರೀಡೆಗಳು ಅವಶ್ಯಕ : ಹರೀಶ ಕುಮಾರ್ ಎಂ ಶೆಟ್ಟಿ, ಶ್ರೀ ಮೂಕಾಂಬಿಕಾ ದೇವಳದ ಪ್ರೌಡಶಾಲೆ ಬೀಸಿನಪಾರೆ ಜಡ್ಕಲ್‍ಇದರ ವಾರ್ಷಿಕ ಕ್ರೀಡೋತ್ಸವ

0
163

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಕ್ರೀಡೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳವುದರಿಂದ ವಿದ್ಯಾರ್ಥಿಗಳ ಸರ್ವತೋಮುಖ ಪ್ರಗತಿ ಸಾಧ್ಯ. ವಿದ್ಯಾರ್ಥಿಗಳು ತಮಗೆ ದೊರೆತ ಅವಕಾಶವನ್ನು ಉಪಯೋಗಿಸಿಕೊಂಡು ಕ್ರೀಡಾಪ್ರತಿಭೆಯನ್ನು ಪೊಷಿಸಿಕೊಳ್ಳುವಂತೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ ಕುಮಾರ್ ಎಂ ಶೆಟ್ಟಿ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಅವರು ಶ್ರೀ ಮೂಕಾಂಬಿಕಾ ದೇವಳದ ಪ್ರೌಡಶಾಲೆ ಬೀಸಿನಪಾರೆ ಜಡ್ಕಲ್‍ಇದರ ವಾರ್ಷಿಕ ಕ್ರೀಡೋತ್ಸವ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಶ್ರೀ ಮೂಕಾಂಬಿಕಾ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಕೆ. ರಮೇಶ್ ಗಾಣಿಗ ಕ್ರೀಡಾ ಜ್ಯೋತೊ ಬೆಳಗಿಸಿದರು, ವ್ಯವಸ್ಥಾಪನಾ ಸಮಿತಿ ಸದಸಯ ನರಸಿಂಹ ಹಳಗೇರಿ ಕ್ರೀಡಾದ್ವಜಾರೋಹಣ ನೆರವೇರಿಸಿದರು.

ರಾಘವೇಂದ್ರ ಗಣಪತಿ ನಾಯ್ಕ ವಲಯ ಅರಣ್ಯಾಧಿಕಾರಿಗಳು ವನ್ಯಜೀವ ವಿಭಾಗ ಕೊಲ್ಲೂರು ಗೌರವ ವಂದನೆ ಸ್ವೀಕರಿಸಿದರು.
ಮುಖ್ಯ ಅತಿಥಿಗಳಾಗಿ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಜಯರಾಮ ಶೆಟ್ಟಿ ವಂಡಬಳ್ಳಿ, ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪಿ.ಎಮ್. ವಿಶ್ವನಾಥ ವೇದಮೂರ್ತಿ ಸೂರ್ಯ ನಾರಾಯಣ ಭಟ್ ಸೆಳ್ಕೋಡು, ಶಾಲಾ ಸ್ಥಾಪಕ ಕಾರ್ಯದರ್ಶಿ ಟಿ.ಎಮ್.ಬಿನೋಮ್, ಬೈಂದೂರು ವಲಯ ದೈಹಿಕ ಶಿಕ್ಷಣ ಶಿಕ್ಷರ ಸಂಘದ ಅಧ್ಯಕ್ಷ ರಾಜೀವ ಶೆಟ್ಟಿ, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕ ಸಂಘದ ಉಪಾಧ್ಯಕ್ಷ ಸಂತೋಷ ಶೆಟ್ಟಿ, ಸ.ಹಿ.ಪ್ರಾ.ಶಾಲೆ ಸೆಳ್ಕೋಡು ಮುಖ್ಯ ಶಿಕ್ಷಕ ಭಾಸ್ಕರ್ ನಾಯ್ಕ್ ಉಪಸ್ಥಿತರಿದ್ದರು.

ಮುಖ್ಯೋಪಾಧ್ಯಾಯರಾದ ರತ್ನಾಕರ ದೇವಾಡಿಗ ಸ್ವಾಗತಿಸಿ, ಸಹಶಿಕ್ಷಕ ಗಣೇಶ ಮತ್ತು ಬಾಲಕೃಷ್ಣ ಶೆಟ್ಟಿ ನಿರೂಪಿಸಿ, ದೈಹಿಕ ಶಿಕಕ ಸತೀಶ ವಂದಿಸಿದರು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)