ಚಿತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ತೆಂಕೂರು ಶ್ರೀ ವನದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಹೋಗುವ ರಸ್ತೆಗೆ 15 ಲಕ್ಷ ಅನುದಾನ ಮಂಜೂರು ಮಾಡಿಸಿ ಅದರ ಗುದ್ದಲಿ ಪೂಜೆಯನ್ನು ಬೈಂದೂರು ಶಾಸಕರಾದ ಬಿ.ಎಮ್ ಸುಕುಮಾರ ಶೆಟ್ಟಿಯವರು ನೆರವೇರಿಸಿದರು.
ಈ ಸಂದರ್ಭದಲ್ಲಿ ಸ್ಥಳೀಯ ವೈದ್ಯರಾದ ಡಾ|ಅತುಲ್ ಕುಮಾರ್ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯ ಪ್ರದೀಪ ಶೆಟ್ಟಿ, ವನದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ವಂಡಬಳ್ಳಿ ಜಯರಾಮ ಶೆಟ್ಟಿ, ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ರಾಮಚಂದ್ರ ಮಂಜ ಮೊದಲಾದವರು ಉಪಸ್ಥಿತರಿದ್ದರು.