ಆಲೂರು ಪ್ರೌಢಶಾಲೆಯಲ್ಲಿ ಅಗ್ನಿಶಾಮಕ ದಳದ ಪ್ರಾತ್ಯಕ್ಷಿಕೆ

0
327

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (2) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಸರಕಾರಿ ಪ್ರೌಢಶಾಲೆ ಆಲೂರಿನಲ್ಲಿ ನ.29ರಂದು ಅಗ್ನಿಶಾಮಕ ಠಾಣೆ ಕುಂದಾಪುರ ಇವರ ವತಿಯಿಂದ ಪ್ರಾತ್ಯಕ್ಷಿಕಾ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಅಗ್ನಿ ಅವಘಡದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಯಿತು. ನಂತರ ಅಗ್ನಿ ಅವಘಡ ಸಂಭವಿಸಿದಾಗ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಪ್ರಾಯೋಗಿಕ ಅಣಕು ಕಾರ್ಯಾಚರಣೆ ನಡೆಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯಶಿಕ್ಷಕರಾದ ನಾಗೇಶ ಕೆ.ನಾಯ್ಕ್ ವಹಿಸಿದ್ದರು. ಅಗ್ನಿಶಾಮಕ ಠಾಣೆ ಕುಂದಾಪುರ ಇಲ್ಲಿನ ಠಾಣಾಧಿಕಾರಿ ಕೆ.ಎನ್. ಮೊಗೇರ ಉಪಸ್ಥಿತರಿದ್ದರು. ಅಗ್ನಿಶಾಮಕ ಠಾಣೆಯ ಸಿಬ್ಬಂದಿಗಳಾದ ರಾಘವೇಂದ್ರ ಆಚಾರ್ಯ, ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಎನ್.ಎನ್.ಎಸ್ ಕಾರ್ಯಕ್ರಮಾಧಿಕಾರಿಗಳಾದ ಶಿಕ್ಷಕ ಉದಯಕುಮಾರ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕರಾದ ಗಣೇಶ ದೇವಾಡಿಗ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಪ್ರವೀಣ್ ಕುಮಾರ್ ಶೆಟ್ಟಿ ವಂದಿಸಿದರು. ಅಗ್ನಿಶಾಮಕ ಠಾಣೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (2) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)