ಪಶುವೈದ್ಯೆ ಮೇಲೆ ಅತ್ಯಾಚಾರ, ಕೊಲೆ; ಎಲ್ಲಾ ಆರೋಪಿಗಳ ಎನ್‌ ಕೌಂಟರ್

0
1207

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (2) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಹೈದರಾಬಾದ್: ದೇಶವನ್ನೇ ಬೆಚ್ಚಿಬೀಳಿಸಿದ್ದ ಹೈದರಾಬಾದ್ ಸಾಮೂಹಿಕ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಎನ್‌ಕೌಂಟರ್‌ ಮಾಡಲಾಗಿದೆ.

ಹೈದರಾಬಾದ್ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ಎನ್‌ಕೌಂಟರ್‌ನಲ್ಲಿ ಕೊಲ್ಲಲಾಗಿದೆ ಎಂದು ಪೊಲೀಸರು
ತಿಳಿಸಿದ್ದಾರೆ. ಹೈದರಾಬಾದ್‌ನ ಶಾದ್‌ನಗರದ ಸಮೀಪವಿರುವ ಚಟಾನ್ ಪಲ್ಲಿ ಬ್ರಿಡ್ಜ್ ಬಳಿ ಮುಂಜಾನೆ ಸುಮಾರು 3:30ರ ವೇಳೆಗೆ ನಾಲ್ವರು ಕಾಮುಕರ ಮೇಲೆ ಗುಂಡು ಹಾರಿಸಲಾಗಿದೆ.

ಆರಂಭಿಕ ವರದಿಗಳ ಪ್ರಕಾರ ಪ್ರಕರಣದ ವಿಚಾರಣೆಗಾಗಿ ಹೈದರಾಬಾದ್‌ನ ಶಾದ್‌ನಗರದಲ್ಲಿ ಆರೋಪಿಗಳನ್ನು ಸ್ಥಳ ಪರಿಶೀಲನೆಗಾಗಿ
ಅತ್ಯಾಚಾರವೆಸಗಿದ್ದ ಸ್ಥಳಕ್ಕೆ ಕರೆದೊಯ್ಯಲಾಗಿತ್ತು. ಈ ವೇಳೆ ಆರೋಪಿಗಳು ಪರಾರಿಯಾಗಲು ಯತ್ನಿಸಿದ್ದರಿಂದ ಎನ್‌ಕೌಂಟರ್‌
ಮಾಡಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ. ಅತ್ಯಾಚಾರ ಪ್ರಕರಣದ ಆರೋಪಿಗಳಾಗಿದ್ದ ಆರಿಫ್, ಶಿವ, ಚೆನ್ನಕೇಶವಲು, ನವೀನ್ ಓಡಿ
ಹೋಗುತ್ತಿದ್ದ ವೇಳೆ ಪೊಲೀಸರು ಎನ್‌ಕೌಂಟರ್‌ ಮಾಡಿದ್ದಾರೆ.

ಹೈದರಾಬಾದ್‌ನ ಶಾದ್‌ನಗರದಲ್ಲಿ ನವೆಂಬರ್ 28 ರಂದು ಸರ್ಕಾರಿ ಆಸ್ಪತ್ರೆಯಲ್ಲಿ ಸಹಾಯಕ ಪಶುವೈದ್ಯರಾಗಿ ಕೆಲಸ ಮಾಡುತ್ತಿದ್ದ 26
ವರ್ಷದ ಯುವತಿ ಸುಟ್ಟ ದೇಹ ಪತ್ತೆಯಾಗಿತ್ತು. ನವೆಂಬರ್ 29 ರಂದು ಘಟನೆಗೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿತ್ತು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (2) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)