ಕೊಲ್ಲೂರು : ಬೀಳ್ಕೊಡುಗೆ ಸಮಾರಂಭ

0
135

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (1) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಲ್ಲೂರಿನಲ್ಲಿ ಸುಮಾರು 8 ವರ್ಷಗಳ ಕಾಲ ವಿಜ್ಞಾನ ಶಿಕ್ಷಕಿಯಾಗಿ ಪ್ರಾಯೋಗಿಕವಾಗಿ ಹಾಗೂ ನಾವೀನ್ಯಯುತ ಚಟುವಟಿಕೆಗಳ ಮೂಲಕ ಮಕ್ಕಳಿಗೆ ಪ್ರೇರಣೆ ನೀಡಿ ಅವರಲ್ಲಿ ವೈಜ್ಞಾನಿಕ ಮನೋಭಾವ ಬೆಳಸಿ ಊರವರ ಹಾಗೂ ವಿದ್ಯಾರ್ಥಿಗಳ ಮೆಚ್ಚುಗೆಗೆ ಪಾತ್ರರಾಗಿ ಇತ್ತೀಚೆಗೆ ಸ.ಹಿ.ಪ್ರಾ.ಶಾಲೆ ಕಂಚಿಕಾನಗೆ ವರ್ಗಾವಣೆಗೊಂಡಿರುವ ಗೀತಾರವರ ಸೇವೆಯನ್ನು ಮನಸಾರೆ ಸ್ಮರಿಸಿ ಅವರಿಗೆ ಬೀಳ್ಕೊಡುಗೆ ಕಾರ್ಯಕ್ರಮ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀ ಮೂಕಾಂಬಿಕಾ ದೇವಸ್ಥಾನ ಕೊಲ್ಲೂರಿನ ವತಿಯಿಂದ ದೇವಸ್ಥಾನದ ವ್ಯವಸ್ಥಾನಾ ಸಮಿತಿಯ ಸದಸ್ಯರಾದ ಕೆ ರಮೇಶ ಗಾಣಿಗರವರು ವರ್ಗಾವಣೆಗೊಂಡ ಶಿಕ್ಷಕಿಯನ್ನು ಗೌರವಿಸಿದರು. ನಂತರ ಶಾಲಾ ವತಿಯಿಂದ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕ ರಾಘವೇಂದ್ರ, ತಾ.ಪಂ ಸದಸ್ಯಡ ಗ್ರೀಷ್ಮಾ ಗಿರಿಧರ ಭಿಡೆ, ಗಾ.ಪಂ ಉಪಾಧ್ಯಕ್ಷೆ ಪ್ರೇಮಾ. ಗ್ರಾ.ಪಂ ಸರ್ವಸದಸ್ಯರು, ಎಸ್.ಡಿ.ಎಮ್.ಸಿ ಅಧ್ಯಕ್ಷ ಚಂದ್ರೇಖರ ಅಡಿಗ, ಎಸ್.ಡಿ.ಎಮ್.ಸಿ ಸರ್ವಸದಸ್ಯರು, ಶಾಲಾ ಶಿಕ್ಷಕ ವೃಂದ, ವಿದ್ಯಾಭಿಮಾನಿಯಾದ ರಾಧಾಚಂದ್ರ ಘೋಷ, ಪೋಷಕರು, ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (1) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)