ಡಿ.14, 15: ವಂಡ್ಸೆ ಆತ್ರಾಡಿಯಲ್ಲಿ ವಲಯ ಮಟ್ಟದ ಸ್ಕೌಟ್ಸ್ ಗೈಡ್ಸ್ ರ್‍ಯಾಲಿ

0
417

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಭಾರತೀಯ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ಬೈಂದೂರು ವಲಯ ಮಟ್ಟದ ಸ್ಕೌಟ್ಸ್ ಮತ್ತು ಗೈಡ್ಸ್ ರ್ಯಾಲಿ ಡಿ.14 ಮತ್ತು 15ರಂದು ವಂಡ್ಸೆ ಗ್ರಾಮದ ಆತ್ರಾಡಿಯ ವಿ.ಎಂ.ಕೆಯಲ್ಲಿ ನಡೆಯಲಿದೆ. ಶಿಬಿರವನ್ನು ಶಾಸಕ ಬಿ.ಎಂ.ಸುಕುಮಾರ್ ಶೆಟ್ಟ ಉದ್ಘಾಟಿಸಲಿದ್ದಾರೆ.

ಅಧ್ಯಕ್ಷತೆಯನ್ನು ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೈಂದೂರು ಇದರ ಅಧ್ಯಕ್ಷ ರಾಜು ದೇವಾಡಿಗ ವಹಿಸಲಿದ್ದಾರೆ. ಜಿ.ಪಂ.ಸದಸ್ಯ ಬಾಬು ಹೆಗ್ಡೆ, ತಾ.ಪಂ.ಸದಸ್ಯ ಉದಯ ಜಿ.ಪೂಜಾರಿ, ಗ್ರಾ.ಪಂ.ಅಧ್ಯಕ್ಷ ಉದಯಕುಮಾರ ಶೆಟ್ಟಿ, ಕೊಲ್ಲೂರು ಮೂಕಾಂಬಿಕಾ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯ ವಂಡಬಳ್ಳಿ ಜಯರಾಮ ಶೆಟ್ಟಿ,ಮಾರಣಕಟ್ಟೆ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಅನುವಂಶಿಯ ಆಡಳಿತ ಮೊಕ್ತೇಸರ ಸದಾಶಿವ ಶೆಟ್ಟಿ, ಕೊಲ್ಲೂರು ದೇವಳದ ಮಾಜಿ ಟ್ರಸ್ಟಿ ಡಾ|ಅತುಲ್ ಕುಮಾರ್ ಶೆಟ್ಟಿ, ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ಜ್ಯೋತಿ, ಗ್ರಾ.ಪಂ.ಉಪಾಧ್ಯಕ್ಷೆ ಶಾರದಾ ರುದ್ರಯ್ಯ ಆಚಾರ್ಯ, ವೆಂಕಮ್ಮ ರಾಮಣ್ಣ ಶೆಟ್ಟಿ ಟ್ರಸ್ಟ್ ಬಗ್ವಾಡಿ ಇದರ ಕಾರ್ಯದರ್ಶಿ ಬಿ.ರಾಜೀವ ಶೆಟ್ಟಿ, ಜಿಲ್ಲಾ, ವಲಯ ಸ್ಕೌಟ್ಸ್ ಮತ್ತು ಗೈಡ್ಸ್ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.

ಈ ಸಂದರ್ಭದಲ್ಲಿ ನಿವೃತ್ತ ಸ್ಕೌಟ್ಸ್ ಶಿಕ್ಷಕ ರಾಜು ಶೆಟ್ಟಿ ಶಾನ್ಕಟ್ಟು ಅವರನ್ನು ಸನ್ಮಾನಿಸಲಾಗುವುದು. ಪುರ ಮೆರವಣಿಗೆಯನ್ನು ಜಿ.ಪಂ.ಮಾಜಿ ಸದಸ್ಯ ಎಚ್.ಮಂಜಯ್ಯ ಶೆಟ್ಟಿ ಉದ್ಘಾಟಿಸಲಿದ್ದಾರೆ. ಸಂಜೆ ನಡೆಯುವ ಶಿಬಿರಾಗ್ನಿ ಕಾರ್ಯಚಟುವಟಿಕೆ ಗ್ರಾ.ಪಂ.ಮಾಜಿ ಅಧ್ಯಕ್ಷ ಶ್ರೀನಿವಾಸ ಪೂಜಾರಿ ಚಾಲನೆ ನೀಡುವರು ಎಂದು ಜಿಲ್ಲಾ ತರಬೇತಿ ಆಯುಕ್ತ ಆನಂದ ಅಡಿಗ, ಸ್ಥಳೀಯ ಸಂಸ್ಥೆ ಕಾರ್ಯದರ್ಶಿ ಮಂಜುನಾಥ ಹೆಗ್ಡೆ, ವಿಎಂಕೆ ಸಂಚಾಲಕ ಸುಭಾಶ್ಚಂದ್ರ ಶೆಟ್ಟಿ, ಮುಖ್ಯೋಪಾಧ್ಯಾಯಿನಿ ದೀಪಿಕಾ ಸುಭಾಸ್ ತಿಳಿಸಿದ್ದಾರೆ.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)