ಶ್ರೀ ಮೂಕಾಂಬಿಕಾ ದೇವಳದ ಪ್ರೌಡಶಾಲೆಯ ವಾರ್ಷಿಕೋತ್ಸವ ಸಮಾರಂಭ

0
157

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (5) ಸಮ್ಮತ (0) ಅಸಮ್ಮತ (0) ಖಂಡಿಸುವೆ (1) ಅಭಿಪ್ರಾಯವಿಲ್ಲ (0)

 

ವಾರ್ಷಿಕೋತ್ಸವ ವಿದ್ಯಾರ್ಥಿಗಳ ನೈಜ ಪ್ರತಿಭೆಗಳನ್ನು ಹೊರಸೂಸುವ ವೇದಿಕೆಯಾಗಿದೆ ಹಾಗೂ ಶ್ರಿ ಮೂಕಾಂಬಿಕಾ ದೇವಳದ ಪ್ರೌಡಶಾಲೆಗಳು ಗುಣಮಟ್ಟದ ಶಿಕ್ಷಣಕ್ಕೆ ಮಾದರಿಯಾಗಿದೆ ಎಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಎಂ ಶೆಟ್ಟಿ ಹೇಳಿದರು. ಅವರು ಬೀಸಿನಪಾರೆ ಶ್ರೀ ಮೂಕಾಂಬಿಕಾ ದೇವಳದ ಪ್ರೌಡಶಾಲೆಯ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ವ್ಯವಸ್ಥಾಪನಾ ಸಮಿತಿಯ ಸದಸ್ಯ ಜಯರಾಮ್ ಶೆಟ್ಟಿ ವಂಡಬಳ್ಳಿ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಜಡ್ಕಲ್ ಗ್ರಾಮ ಪಂಚಾಯತ್ ಅಧ್ಯಕ್ಷ ಅನಂತಮೂರ್ತಿ, ಶಾಲಾ ಸ್ಥಾಪಕಾಧ್ಯಕ್ಷ ಕೆ.ಕೆ. ಸಾಬು, ದೇವಳದ ವ್ಯವಸ್ಥಾಪನಾ ಸಮಿತಿಯ ಮಾಜಿ ಸದಸ್ಯ ಅತುಲ್ ಕುಮಾತ್ ಶೆಟ್ಟಿ, ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಕರುಣಾಕರ ಶೆಟ್ಟಿ, ಸುಧಾಕರ, ಶಾಲಾ ಸ್ಥಾಪಕ ಕಾರ್ಯದರ್ಶಿ ಟಿ.ಎ ಬಿನೋಯ್, ವಿದ್ಯಾರ್ಥಿ ನಾಯಕಿ ಆಶ್ರಿತಾ ಉಪಸ್ಥಿತರಿದ್ದರು.

ಮುಖ್ಯ ಶಿಕ್ಷಕ ರತ್ನಾಕರ ದೇವಾಡಿಗ ಸ್ವಾಗತಿಸಿ ಪ್ರಾಸ್ತಾವಿಸಿದರು, ಶಿಕ್ಷಕ ಗಣೇಶ ಹಾಗೂ ಬಾಲಕೃಷ್ಣ ಶೆಟ್ಟಿ ನಿರೂಪಿಸಿ, ದೈಹಿಕ ಶಿಕ್ಷಕ ಸತೀಶ್ ವಂದಿಸಿದರು.

 

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (5) ಸಮ್ಮತ (0) ಅಸಮ್ಮತ (0) ಖಂಡಿಸುವೆ (1) ಅಭಿಪ್ರಾಯವಿಲ್ಲ (0)