ಪೇಜಾವರ ಶ್ರೀಗಳಿಗೆ ಅನಾರೋಗ್ಯ : ಆಸ್ಪತ್ರೆಗೆ ದಾಖಲು

0
93

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಪೇಜಾವರ ಮಠಾಧೀಶ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅವರ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದ ಕಾರಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇಂದು ಮುಂಜಾನೆ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು ತಕ್ಷಣವೇ ಅವರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಶ್ರೀಗಳು ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಹಿಂದೆ ಶ್ರೀಗಳು ಉತ್ತರ ಭಾರತ, ತಿರುಪತಿ ಹಾಗೂ ಚೆನ್ನೈ ಪ್ರವಾಸದಲ್ಲಿದ್ದರು. ಗುರುವಾರ ರಾತ್ರಿ ಶೀತದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಮುಂಜಾನೆ ಶ್ರೀಗಳಿಗೆ ತೀವ್ರವಾಗಿ ಉಸಿರಾಟದ ತೊಂದರೆ ಉಂಟಾಗಿದೆ.

ಸದ್ಯ ಪೇಜಾವರ ಶ್ರೀಗಳ ಆರೋಗ್ಯ ಸುಧಾರಣೆಯಾಗಿದೆ ಎಂದು ವರದಿಯಾಗಿದೆ.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)