ಪ್ರಗತಿಪರ ರೈತರನ್ನು ಗುರುತಿಸಿ ಸನ್ಮಾನಿಸುವಂತಾಗಬೇಕು : ಬಿ.ಎಂ.ಸುಕುಮಾರ್ ಶೆಟ್ಟಿ, ರೈತರ ದಿನಾಚರಣೆ ಕಾರ್ಯಕ್ರಮ

0
147

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

  

ಉಡುಪಿ ಜಿಲ್ಲಾ ಪಂಚಾಯತ್ ಕೃಷಿ ಇಲಾಖೆ ಕುಂದಾಪುರ ಆತ್ಮ ಅನುಷ್ಠಾನ ಸಮಿತಿ, ಕೃಷಿಕ ಸಮಾಜ ಕುಂದಾಪುರ ತಾಲೂಕು ಇವರ ಸಂಯುಕ್ತ ಆಶ್ರಯದಲ್ಲಿ 2019-20 ನೇ ಸಾಲಿನ ರೈತರ ದಿನಾಚರಣೆ ಕಾರ್ಯಕ್ರಮವನ್ನು ಮಹಾಲಸಾ ಕಲ್ಚರಲ್ ಹಾಲ್ ನಾಗೂರುನಲ್ಲಿ ನಡೆಯಿತು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಿರಿಮಂಜೇಶ್ವರ ಗ್ರಾಮಪಂಚಾಯತ್ ನ ಅಧ್ಯಕ್ಷೆ ಲಲಿತ ಖಾರ್ವಿರವರು ವಹಿಸಿದ್ದರು.

ಬೈಂದೂರು ವಿಧಾನ ಕ್ಷೇತ್ರದ ಶಾಸಕರು ಬಿ.ಎಂ.ಸುಕುಮಾರ್ ಶೆಟ್ಟಿ ಹಿಂಗಾರ ಅರಳಿಸಿ ಹಾಲೆರೆಯುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಪ್ರಗತಿಪರ ರೈತರನ್ನು  ಗುರುತಿಸಿ ಸನ್ಮಾನಿಸುವಂತಾಗಬೇಕು ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಕುಂದಾಪುರ ತಾಲೂಕು ಪಂಚಾಯತ್ ಅಧ್ಯಕ್ಷೆ ಶ್ಯಾಮಲಾ ಕುಂದರ್ , ಜಿಲ್ಲಾ ಪಂಚಾಯತ್ ಸದಸ್ಯೆ ಗೌರಿ ದೇವಾಡಿಗ , ಕುಂದಾಪುರ ತಾಲೂಕು ಕೃಷಿಕ ಸಮಾಜದ ಉಪಾಧ್ಯಕ್ಷ ಡಾ. ಅತುಲ್ ಕುಮಾರ್ ಶೆಟ್ಟಿ, ಉಪ ಕೃಷಿ ನಿರ್ದೇಶಕ ಚಂದ್ರಶೇಖರ ನಾಯ್ಕ  ಉಪಸ್ಥಿರಿದ್ದರು.

ಸಂಪನ್ಮೂಲ ವ್ಯಕ್ತಿಗಳಾಗಿ ಕಂಭದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ, ಪ್ರಗತಿಪರ ಕೃಷಿಕ ವೆಂಕಟೇಶ  ಹೋಸ್ಕೋಟೆ, ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದ  ವಿಜ್ಞಾನಿಗಳಾದ ಡಾ. ಸಚಿನ್ ಉಪಸ್ಥಿತರಿದ್ದರು

ಕೃಷಿ ಅಧಿಕಾರಿ ಗಾಯತ್ರಿದೇವಿ ಎಸ್ ಸ್ವಾಗತಿಸಿದರು, ಸಹಾಯಕ ಕೃಷಿ ನಿರ್ದೆಶಕ  ರೂಪಾ ಜೆ ಮಾಡ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಹಾಯಕ  ಕೃಷಿ ಅಧಿಕಾರಿ ಪರಶುರಾಮ್ ಮುತ್ತಪ್ಪಗೋಳ ವಂದಿಸಿದರು, ಪದ್ಮನಾಭ  ಹೆಬ್ಬಾರ್  ನಾಗೂರು ಕಾರ್ಯಕ್ರಮ ನಿರೂಪಿಸಿದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)