ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿ ಪೂರ್ವ ಕಾಲೇಜು ವಾರ್ಷಿಕೋತ್ಸವ

0
78

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

 

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿ ಪೂರ್ವ ಕಾಲೇಜು ವಾರ್ಷಿಕೋತ್ಸವವನ್ನು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಉದ್ಘಾಟಿಸಿದರು.

ಸಭಾಧ್ಯಕ್ಷತೆಯನ್ನು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಎಂ ಶೆಟ್ಟಿ ವಹಿಸಿದರು.

ಡಾ.ಎಂ.ದಿನೇಶ್ ಹೆಗ್ಡೆ ನಿವೃತ್ತ ಪ್ರಾಂಶುಪಾಲರು ಶಾರದಾ ಪದವಿ ಕಾಲೇಜು ಬಸ್ರೂರು ಇವರು ಆಶಯ ಭಾಷೆಣ ಗೈದರು.

ಮುಖ್ಯ ಅತಿಥಿಗಳಾಗಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ವ್ಯವಸ್ಥಾಪನ ಸಮಿತಿಯ ಸದಸ್ಯ ರಮೇಶ್ ಗಾಣಿಗ ಕೊಲ್ಲೂರು, ಹಳೆ ವಿದ್ಯಾರ್ಥಿ ರಾಜಶೇಖರ್, ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ನಾಗರಾಜ್ ಭಟ್ ಉಪಸ್ಥಿತರಿದ್ದರು.

ಡಾ.ಎಂ.ದಿನೇಶ್ ಹೆಗ್ಡೆ ಅವರನ್ನು ಗೌರವಿಸಲಾಯಿತು ಮತ್ತು 2018-19 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಷಯವಾರು 100ಕ್ಕೆ 100 ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು ಹಾಗೂ ರಾಷ್ಟ್ರಮಟ್ಟದ ಕ್ರೀಡೆಗೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಪ್ರಾಂಶುಪಾಲರಾದ ಅರುಣ್ ಪ್ರಕಾಶ್ ಶೆಟ್ಟಿ ಸ್ವಾಗತಿಸಿದರು, ಉಪನ್ಯಾಸಕಿ ಪೂರ್ಣಿಮಾ ಜೋಯಿಸ್ ನಿರೂಪಿಸಿದರು. ಗೋಪಾಲಕೃಷ್ಣ ಜಿಬಿ ಧನ್ಯವಾದ ಸಮರ್ಪಿಸಿದರು.ತದನಂತರ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)