ತುಮಕೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ

0
400

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ತುಮಕೂರು, ಜನವರಿ 02: ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಭೇಟಿಗಾಗಿ ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ. ಗುರುವಾರ ಮತ್ತು ಶುಕ್ರವಾರ ವಿವಿಧ ಕಾರ್ಯಕ್ರಮಗಳಲ್ಲಿ ಮೋದಿ ಪಾಲ್ಗೊಳ್ಳಲಿದ್ದಾರೆ. ಮೋದಿ ಭೇಟಿಯ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿ ಭದ್ರತೆ ಹೆಚ್ಚಿಸಲಾಗಿದೆ.

ಗುರುವಾರ ಮಧ್ಯಾಹ್ನ 1.20ಕ್ಕೆ ನರೇಂದ್ರ ಮೋದಿ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಲಿಸಲಿದ್ದಾರೆ. ತುಮಕೂರು ಮತ್ತು ಬೆಂಗಳೂರಿನಲ್ಲಿ ಜನವರಿ 2 ಮತ್ತು 3ರಂದು ವಿವಿಧ ಕಾರ್ಯಕ್ರಮಗಳಲ್ಲಿ ಅವರು ಭಾಗವಹಿಸಲಿದ್ದು, ಶುಕ್ರವಾರ ಮಧ್ಯಾಹ್ನ ದೆಹಲಿಗೆ ವಾಪಸ್ ತೆರಳಿದ್ದಾರೆ.

ನರೇಂದ್ರ ಮೋದಿ ಗುರುವಾರ ರಾತ್ರಿ ರಾಜಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಆದ್ದರಿಂದ ಬೆಂಗಳೂರು ನಗರದಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಪ್ರಧಾನಿ ಸಾಗುವ ಮಾರ್ಗದಲ್ಲಿ ಸಂಚಾರ ವ್ಯವಸ್ಥೆಯಲ್ಲಿ ಹಲವು ಬದಲಾವಣೆಗಳನ್ನು ಮಾಡಲಾಗಿದೆ.

ಗುರುವಾರ ನರೇಂದ್ರ ಮೋದಿ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಲಿದ್ದಾರೆ. ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಲಿದ್ದಾರೆ. ರೈತ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ ಬೆಂಗಳೂರಿನ ಡಿಆರ್‌ಡಿಓನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)