ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

0
92

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

 

ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿ ಪೂರ್ವ ಕಾಲೇಜು ಕೊಲ್ಲೂರು ಮತ್ತು ಎ.ಜೆ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಕೊಲ್ಲೂರು ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಉದ್ಘಾಟಿಸಿದರು. ಕೊಲ್ಲೂರು ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಹರೀಶ್ ಕುಮಾರ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ದೇವಳದ ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಕೆ. ರಮೇಶ್ ಗಾಣಿಗ, ಡಾ ಅಭಿಲಾಷ್ ಪಿ.ವಿ ಮತ್ತು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಕಾಶ್ ಪೂಜಾರಿ, ಕೊಲ್ಲೂರು ತಾಲೂಕು ಪಂಚಾಯತ್ ಸದಸ್ಯರಾದ ಗ್ರೀಷ್ಮಾ ಗಿರಿಧರ ಭಿಡೆ ಮತ್ತು ಗ್ರಾಮ ಪಂಚಾಯತ್ ಸದಸ್ಯರಾದ ಜಯಪ್ರಕಾಶ್ ಶೆಟ್ಟಿ ಹಾಗೂ ಎ.ಜೆ ಆಸ್ಪತ್ರೆ ವೈದ್ಯಾಧಿಕಾರಿಗಳು ಮತ್ತು ಊರ ನಾಗರಿಕರು ಉಪಸ್ಥಿತರಿದ್ದರು.

ಪ್ರಾಂಶುಪಾಲರಾದ ಅರುಣ್ ಪ್ರಕಾಶ್ ಶೆಟ್ಟಿ ಸ್ವಾಗತಿಸಿದರು, ವಿದ್ಯಾರ್ಥಿನಿ ಅನುಷಾ ಶೆಟ್ಟಿ ನಿರೂಪಿಸಿದರು,ವಿದ್ಯಾರ್ಥಿನಿ ಪೂರ್ಣಾ ಎಸ್.ಭಟ್ ಧನ್ಯವಾದ ಸಮರ್ಪಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಮುಂದಿನ ದಿನಗಳಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಆರು ವಿದ್ಯಾಸಂಸ್ಥೆಗಳಿಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಸುವುದೆಂದು ದೇವಳದ ವ್ಯವಸ್ಥಾಪನ ಸಮಿತಿಯ ಸದಸ್ಯರಾದ ರಮೇಶ್ ಗಾಣಿಗ ಹಾಗೂ ಡಾ ಅಭಿಲಾಷ್ ಪಿ.ವಿ ತಿಳಿಸಿರುತ್ತಾರೆ.

ಸಾಮಾನ್ಯ ಆರೋಗ್ಯ ತಪಾಸಣೆ, ಕಣ್ಣಿನ ತಪಾಸಣೆ, ಗಂಟಲು, ಕಿವಿ, ಮೂಗು, ಚರ್ಮರೋಗ ತಪಾಸಣೆ, ದಂತ ತಪಾಸಣೆ ನಡೆಸಲಾಯಿತು.

ಈ ತಪಾಸಣೆಯಲ್ಲಿ ಸುಮಾರು 500 ಜನ ಸದುಪಯೋಗಪಡಿಸಿಕೊಂಡರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)