ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ : ಶೀಘ್ರದಲ್ಲಿ ಸ್ವಸಹಾಯ ಸಂಘಗಳಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ

0
190

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಉಡುಪಿ : ರಾಜ್ಯ ಸರ್ಕಾರವು ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದ್ದು, ಶೀಘ್ರದಲ್ಲೇ ಸ್ವಸಹಾಯ ಸಂಘಗಳಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ನೀಡುವುದರ ಬಗ್ಗೆ ಚಿಂತನೆ ನಡೆದಿದೆ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.

ಕಡಿಯಾಳಿಯ ಬಿಜೆಪಿ ಜಿಲ್ಲಾ ಕಚೇರಿಗೆ ನೀಡಿದ ಬಳಿಕ ಮಾತನಾಡಿದ ಅವರು, ಸಾಲ ಮರುಪಾವತಿಯಲ್ಲಿ ಪುರುಷರಿಗಿಂತ ಮಹಿಳೆಯರು ಹೆಚ್ಚು ಪ್ರಾಮಾಣಿಕರಾಗಿ ಕಾರಣದಿಂದ ಸ್ವಸಹಾಯ ಸಂಘಗಳಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ನೀಡುವುದರ ಬಗ್ಗೆ ಚಿಂತನೆ ನಡೆದಿದೆ ಅಂತ ಹೇಳಿದರು.

ಇನ್ನು ರಾಜ್ಯದಲ್ಲಿ ಹೈಟೆಕ್ ಅಂಗನವಾಡಿ ನಿರ್ಮಾಣ, ಆಟ ಕಲಿಕೆಯ ಡಿಜಿಟಲ್ ವ್ಯವಸ್ಥೆ, ಬಯೋಮೆಟ್ರಿಕ್ ಹಾಜರಾತಿ(ಫೇಸ್ ಆಯಪ್), ಸ್ವಂತ ಕಟ್ಟಡ ನಿರ್ಮಾಣ, ಹಣ ಸೋರಿಕೆ ತಡೆಗೆ ಉದ್ದೇಶಿಸಿದ್ದು ಅನರ್ಹರು ಬಿಪಿಎಲ್ ಕಾರ್ಡನ್ನು ಜ. 31ರೊಳಗೆ ಹಿಂತಿರುಗಿಸಬೇಕು ಎಂದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)