ವಂಡ್ಸೆ ಗ್ರಾ.ಪಂ.ಅನುದಾನದಿಂದ ವಂಡ್ಸೆ ಶಾಲೆಗೆ ವಿಜ್ಞಾನ ಪಾಠೋಪಕರಣ, ಕ್ರೀಡಾ ಸಲಕರಣೆ ಹಸ್ತಾಂತರ

0
174

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ವಂಡ್ಸೆ ಗ್ರಾಮ ಪಂಚಾಯತ್ ವತಿಯಿಂದ ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಸುಮಾರು 35,000 ಮೌಲ್ಯದ ವಿಜ್ಞಾನ ಪಾಠೋಪಕರಣ ಮತ್ತು ಕ್ರೀಡಾ ಸಲಕರಣೆಗಳನ್ನು ಹಸ್ತಾಂತರಿಸುವ ಕಾರ್ಯಕ್ರಮ ಜ.10ರಂದು ನಡೆಯಿತು.

ವಂಡ್ಸೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಉದಯ ಕುಮಾರ್ ಶೆಟ್ಟಿ ಮತ್ತು ಪಂಚಾಯತ್ ಅಭಿವೃದ್ದಿ ಅಧಿಕಾರಿ ರೂಪಾ ಗೋಪಿ ಅವರು ವಿಜ್ಞಾನ ಪಾಠೋಪಕರಣ ಹಾಗೂ ಕ್ರೀಡಾ ಸಲಕರಣೆಗಳನ್ನು ಶಾಲೆಗೆ ಹಸ್ತಾಂತರಿಸಿದರು.

ಎಸ್.ಡಿ.ಎಂ.ಸಿ ಅಧ್ಯಕ್ಷ ಮಂಜುನಾಥ ಎ.ಜಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶಾರದಾ ರುದ್ರಯ್ಯ ಆಚಾರ್ಯ, ಗ್ರಾ.ಪಂ.ಸದಸ್ಯೆ ಸಿಂಗಾರಿ, ಲಕ್ಷ್ಮೀ, ವಂಡ್ಸೆ ಶಾಲೆ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂದೇಶ ಶೆಟ್ಟಿ, ಶಾಲೆಯ ಹಿರಿಯ ಶಿಕ್ಷಕಿ ಆಶಾ ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

ಶಾಲೆಯ ಮುಖ್ಯಶಿಕ್ಷಕ ಚಂದ್ರ ನಾಯ್ಕ ಎಚ್. ಸ್ವಾಗತಿಸಿ, ಶಿಕ್ಷಕ ರವಿಚಂದ್ರ ವಂದಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ರಾಜು ಎನ್.ಕಾರ್ಯಕ್ರಮ ನಿರ್ವಹಿಸಿದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)