ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮ ವಿದೇಶಿ ಕರೆನ್ಸಿ ಪತ್ತೆ ; ಆರೋಪಿ ವಶ

0
153

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಮಂಗಳೂರು : ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತಾ ಪರಿಶೀಲನೆ ವೇಳೆ ಅಧಿಕಾರಿಗಳು ವಿದೇಶಿ ಕರೆನ್ಸಿ ಪತ್ತೆ ಮಾಡಿದ್ದು, ಈ ಸಂಬಂಧ ಆರೋಪಿ ಶಾಹುಲ್ ಹಮೀದ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇಂದು ಬೆಳಗ್ಗೆ ಮಂಗಳೂರಿನಿಂದ ದುಬೈಗೆ ಪ್ರಯಾಣಿಸಬೇಕಿದ್ದ ಶಾಹುಲ್ ಹಮೀದ್ ನನ್ನು ಅನುಮಾನಾಸ್ಪದವಾಗಿ ವಶಕ್ಕೆ ಪಡೆದು ವಿಚಾರಣೆ ನಡೆಸಿದ ವೇಳೆ ಅಕ್ರಮ ವಿದೇಶ ಕರೆನ್ಸಿ ಪತ್ತೆಯಾಗಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದು, 548000 ಸಾವಿರ ರೂ. ಮೌಲ್ಯದ ಯುಎಸ್ ಡಾಲರ್, ಚೀನೀ, ಮಲೇಷ್ಯಾ ಮತ್ತು ಟರ್ಕಿ ಕರೆನ್ಸಿ ವಶಪಡಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)