ಮಾಜಿ ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ ಕೊಲ್ಲೂರು ದೇವಳಕ್ಕೆ ಭೇಟಿ

0
32

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

 

ಕರ್ನಾಟಕ ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಅವರು ಕುಟುಂಬ ಸಮೇತರಾಗಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಚಂಡಿಕಾ ಹೋಮದಲ್ಲಿ ಪಾಲ್ಗೊಂಡರು.

ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಶೆಟ್ಟಿ, ವ್ಯವಸ್ಥಾಪನ ಸಮಿತಿ ಸದಸ್ಯ ರಮೇಶ್ ಗಾಣಿಗ ಕೊಲ್ಲೂರು , ಡಾ.ಅಭಿಲಾಷ್ ಪಿ. ವಿ, ನರಸಿಂಹ ಹಳಗೇರಿ ಮತ್ತು ದೇವಳದ ಅಧೀಕ್ಷಕ ರಾಮಕೃಷ್ಣ ಅಡಿಗ, ಕೊಲ್ಲೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಎಸ್ ಕುಮಾರ್ ಹಾಗೂ ಅರ್ಚಕರು ಉಪಸ್ಥಿತರಿದ್ದರು.

ದೇವಳದ ವತಿಯಿಂದ ಮಾಜಿ ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ದಂಪತಿಗಳಿಗೆ ಶಾಲು ಹೊದಿಸಿ ಗೌರವಿಸಿದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)