ಬಿಗ್ ನ್ಯೂಸ್: ಕೊಡಚಾದ್ರಿ-ಕೊಲ್ಲೂರು ನಡುವೆ ಕೇಬಲ್‍ ಕಾರ್ ಸಂಪರ್ಕ

0
189

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (6) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಶಿವಮೊಗ್ಗ: ಕೊಡಚಾದ್ರಿ ಮತ್ತು ಕೊಲ್ಲೂರು ನಡುವೆ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಸಾರ್ವಜನಿಕ ಸಹಭಾಗಿತ್ವದಲ್ಲಿ ಕೇಬಲ್‍ಕಾರ್ ಸಂಪರ್ಕ ವ್ಯವಸ್ಥೆ ಕಲ್ಪಿಸಲು ಉದ್ದೇಶಿಸಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.

ನಗರದ ಪ್ರವಾಸಿ ಮಂದಿರದಲ್ಲಿ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು ನೀಡಲು ಕೈಗೊಳ್ಳಬಹುದಾದ ಯೋಜನೆಗಳು ಹಾಗೂ ಸಾಧ್ಯತೆ, ಸವಾಲುಗಳ ಬಗ್ಗೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ತಜ್ಞರೊಂದಿಗೆ ಸಮಾಲೋಚನೆ ನಡೆಸಿದ ಅವರು, ಕೊಲ್ಲೂರು ಮತ್ತು ಕೊಡಚಾದ್ರಿ ನಡುವೆ ಸುಮಾರು 32 ಕಿ.ಮೀ. ದೂರದ ಅಂತರವಿದ್ದು, 11 ಕಿ.ಮೀ. ಕೇಬಲ್ ಕಾರ್ ಸಂಪರ್ಕ ಅಳವಡಿಸುವುದರಿಂದ ಪ್ರಯಾಣದ ಅಂತರ ಕಡಿಮೆಯಾಗಲಿದೆ ಅಲ್ಲದೆ ಸಮಯದ ಉಳಿತಾಯವಾಗಲಿದೆ ಎಂದು ಹೇಳಿದ್ದಾರೆ.

ಈ ಭಾಗದ ಪ್ರಾಕೃತಿಕ ಸೌಂದರ್ಯಕ್ಕೆ ಕಿಂಚಿತ್ತೂ ಚ್ಯುತಿಯಾಗದಂತೆ ಹಾಗೂ ಇರುವ ಪ್ರಕೃತಿ ಸೌಂದರ್ಯವನ್ನು ಉಳಿಸಿಕೊಂಡು ಅಭಿವೃದ್ಧಿಪಡಿಸಬಹುದಾದ ವಿಧಾನಗಳ ಕುರಿತು ಸಮೀಕ್ಷೆ ಮಾಡಿ ಪ್ರಸ್ತಾವನೆ ಸಲ್ಲಿಸಿದಲ್ಲಿ, ಅದನ್ನು ಪರಿಶೀಲಿಸಿ, ಪರಿಸರ, ಅರಣ್ಯ ಇಲಾಖೆಗಳಿಂದ ನಿರಾಪೇಕ್ಷಣ ಪತ್ರ ಪಡೆಯಲು ಹಾಗೂ ಕೇಂದ್ರ ಸರ್ಕಾರದಿಂದ ಅನುಮತಿ ಕೊಡಿಸುವ ಬಗ್ಗೆ ಆಲೋಚಿಸಲಾಗುವುದು ಎಂದು ತಿಳಿಸಿದ್ದಾರೆ.

ಪ್ರಸ್ತಾವಿತ ಯೋಜನೆಗೆ 1200 ಕೋಟಿ ರೂ.ಗಳ ಅಂದಾಜು ವೆಚ್ಚ ತಗಲುವ ಸಾಧ್ಯತೆ ಇದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಅಗತ್ಯ ಸಹಕಾರ ನೀಡಿದಲ್ಲಿ ಯೋಜನೆಯನ್ನು ನಿಗಧಿತ ಕಾಲಮಿತಿಯಲ್ಲಿ ಪೂರ್ಣಗೊಳಿಸಲು ಯತ್ನಿಸಲಾಗುವುದು ಎಂದು ಬೆಂಗಳೂರು ಮೀನಸ್ ಅಡ್ವೆಂಚರ್ಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ನಜೀರ್ ಎ.ಭಟ್ ಹೇಳಿದ್ದಾರೆ.

ಜಿಲ್ಲೆಯ ವಿವಿಧ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಸಂಬಂಧಿಸಿದಂತೆಯೂ ಸಮಾಲೋಚನೆ ನಡೆಸಿದ ಸಂಸದ ಬಿ.ವೈ.ರಾಘವೇಂದ್ರ ಅವರು, ಇದೇ ಮಾದರಿಯಲ್ಲಿ ಜೋಗ ಅಭಿವೃದ್ಧಿಗೂ ಗಮನಹರಿಸುವ ಅಗತ್ಯತೆಗಳ ಬಗ್ಗೆ ಕ್ರಮ ವಹಿಸುವುದಾಗಿ ತಿಳಿಸಿದ್ದಾರೆ.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (6) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)