ಅಂಬಾ ಕ್ರಿಕೆಟರ್ಸ್ ಮುಳ್ಳಿಕಟ್ಟೆ ಇದರ ಮೂವತ್ತು ಗಜಗಳ ಆರ್ಮ್ ಕ್ರಿಕೆಟ್ ಪಂದ್ಯಾಟ 2020

0
83

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (2) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆಯ ಅಂಬಾ ಕ್ರಿಕೆಟರ್ಸ್ನ ಇದರ 21ನೇ ವರ್ಷದ ಮೂವತ್ತು ಗಜಗಳ ಆರ್ಮ್ ಕ್ರಿಕೆಟ್ ರಾಘು ಟ್ರೊಪಿಯ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಉದ್ಯಮಿ ಚಿತ್ತರಂಜನ್ ಹೆಗ್ಡೆ ದೀಪ ಬೆಳಗಿಸುದರ ಮುಖಾಂತರ ಪಂದ್ಯಾಟಕ್ಕೆ ಚಾಲನೆ ನೀಡಿ, ಯುವಕರು ಸಂಘಟಿತಗೊಂಡರೆ ಅಸಾಧ್ಯವಾದ ಕೆಲಸವನ್ನು ಯಶಸ್ವಿಗೊಳಿಸಲು ಸಾಧ್ಯವಿದೆ, ಕ್ರಿಕೆಟ್ ಪಂದ್ಯಾಟದ ಜೊತೆಗೆ ಸಾಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕೆಂದರು.

ಮುಖ್ಯ ಅತಿಥಿಗಳಾಗಿ ಡಾ.ಕಿಶೋರ್ ಕುಮಾರ್ ಶೆಟ್ಟಿ,ಪಂ.ಸದಸ್ಯ ಸೀತಾರಾಮ ಶೆಟ್ಟಿ, ಸುಧಾಕರ ಶೆಟ್ಟಿ ಅಂಬಾ,ಉದ್ಯಮಿ ರತ್ನಾಕರ ಶೆಟ್ಟಿ ಮುಂಬಯಿ, ನರಸಿಂಹ ಶೆಟ್ಟಿ, ಸೀತಾರಾಮ ಶೆಟ್ಟಿ ನಂದ್ರೊಳ್ಳಿ, ಸುರೇಂದ್ರ ಶೆಟ್ಟಿ, ಜಗನ್ನಾಥ ಶೆಟ್ಟಿ,ಪಾತ್ರಿ ಮಂಜಯ್ಯ ಶೆಟ್ಟಿ, ರಘುರಾಮ ಶೆಟ್ಟಿ ಉಪಸ್ಥಿತರಿದ್ದರು

ಸೋಲು ಗೆಲುವು ಪಂದ್ಯದೊಳಗೆ ಮತ್ತು ಜೀವನದೊಳಗೆ ಬಂದು ಹೋಗುತ್ತವೆ ಎಲ್ಲವನ್ನು ಸಮಾನವಾಗಿ ಸ್ವಿಕರಿಸಬೇಕು ಎಂದು ಎಲ್ಲಾ ತಂಡಕ್ಕೂ ಡಾ.ಕಿಶೋರ್ ಕುಮಾರ್ ಶೆಟ್ಟಿ ಶುಭ ಹಾರೈಸಿದರು.

ಅಜೀತ್ ಕುಮಾರ್ ಶೆಟ್ಟಿ ಕಾರ್ಯಕ್ರಮವನ್ನು ನಿರ್ವಹಿಸಿದರು.

ವರದಿ: ಜಗದೀಶ ದೇವಾಡಿಗ ಮುಳ್ಳಿಕಟ್ಟೆ

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (2) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)