ಕೊಲ್ಲೂರು : ಸ್ವಚ್ಛತಾ ಕಾರ್ಯಕ್ರಮ

0
70

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಕೊಲ್ಲೂರು ಗ್ರಾಮ ಪಂಚಾಯತ್, ಅವಿಷ ಚಾರಿಟೇಬಲ್ ಟ್ರಸ್ಟ್ ಬೆಂಗಳೂರು ಹಾಗೂ ಕಲ್ಯಾಣಿಗುಡ್ಡೆ ನಿವಾಸಿಗಳು ಇವರ ಸಹಯೋಗದೊಂದಿಗೆ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಸದ್ರಿ ಸ್ವಚ್ಛತಾ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಕೆ.ಪ್ರಕಾಶ್, ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪ್ರೇಮಾ ಗ್ರಾಮ ಪಂಚಾಯತ್ ಸದಸ್ಯರಾದ ಎಚ್ ಜಯಪ್ರಕಾಶ್ ಶೆಟ್ಟಿ, ಕೆ.ಎನ್ ವಿಶ್ವನಾಥ ಅಡಿಗ, ಎಸ್ ಕುಮಾರ್, ನೇತ್ರಾವತಿ ಹಾಗೂ ಗ್ರಾಮ ಪಂಚಾಯತ್ ಅಭಿವೃದ್ಧ ಅಧಿಕಾರಿ ರಾಜೇಶ್ ಉಪಸ್ಥಿತರಿದ್ದರು.

ಅವಿಷ ಚಾರಿಟೇಬಲ್ ಟ್ರಸ್ಟ್ ಬೆಂಗಳೂರು ಇವರು ಕಳೆದ ಏಳು ವರ್ಷಗಳಿಂದ ಸಮಾಜಮುಖಿ ಕಾರ್ಯಕ್ರಮಗಳಲ್ಲಿ ತೊಡಗಿದ್ದು ಆರೋಗ್ಯ, ಶಿಕ್ಷಣ, ಪರಸರ ಸ್ವಚ್ಛತೆ ಹೀಗೆ ಹಲವು ಕಾರ್ಯಕ್ರಮಗಳಲ್ಲಿ ನಿರತವಾಗಿದೆ ಹಾಗೂ ಉಡುಪಿ ಜಿಲ್ಲಾ ಪಂಚಾಯತಿಯ ಸಹಯೋಗದೊಂದಿಗೆ ಕಳೆದ ಹತ್ತು ವರ್ಷಗಳಿಂದ ಎಸ್ ಎಲ್ ಆರ್ ಎಮ್ ಕುರಿತಾದ ಜನ ಜಾಗೃತಿ ಕಾರ್ಯಕ್ರಮಗಳನ್ನು ಆಯ್ದ ಗ್ರಾಮ ಪಂಚಾಯತ್‍ಗಳಲ್ಲಿ ಸ್ವಚ್ಛತೆಯ ಬಗ್ಗೆ ಜನರಿಗೆ ಅರಿವು ಮೂಡಿಸುವ ಕೆಲಸ ನಡೆಸುತ್ತಿದೆ. ಇದರಲ್ಲಿ ಟ್ರಸ್ಟಿನ ಸ್ಥಾಪಕ ದಿವಾಕರ ಎಚ್ ಎಸ್, ರಷ್ಠಿ ದಿವಾಕರ ಹಾಗೂ ಸ್ವಯಂ ಸೇವಕರಾದ ಅಕ್ಷಯ. ರಕ್ಷಿತ, ತೇಜಸ್ವಿನಿ, ಸೋಮೇಶ್ವರ್, ಯಶೋಧ, ಪಾರ್ವತಿ. ಬೃಂದಾ ಭಾಗವಹಿಸಿರುತ್ತಾರೆ.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)