ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಕೊಲ್ಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಅಕ್ಷತ್ ಕುಮಾರ್ ರಾಜ್ಯ ಮಟ್ಟಕ್ಕೆ ಆಯ್ಕೆ

0
331

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

   

ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ನವದೆಹಲಿ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಸಂಸ್ಥೆ ಬೆಂಗಳೂರು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಸಾರ್ವಜನಿಕ ಶಿಕ್ಷಣ ಇಲಾಖೆ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳೂರು ಪಿಲಿಕುಳ ನಿಸರ್ಗಧಾಮದಲ್ಲಿ ನಡೆದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮಟ್ಟದ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಇನ್ ಸ್ಪಾಯರ್ ಅವಾರ್ಡ್ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಪ್ರೇಮ ಅರುಣ್ ಆಚಾರ್ಯ ದಂಪತಿಗಳ ಪುತ್ರ ಅಕ್ಷತ್ ಕುಮಾರ್ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ.

ಇವರ ವಿಜ್ಞಾನ ಪ್ರಾತ್ಯಕ್ಷಿಕೆ ಯೂ ರೈಲ್ವೆ ಗೇಟನ್ನು ಅಟೋಮ್ಯಾಟಿಕ್ ತೇರೇಯುವುದು ಹಾಗೂ ಮುಚ್ಚುವುದು. ವಿಜ್ಞಾನ ಶಿಕ್ಷಕಿ ಗೀತಾ ಮತ್ತು ಶಾಲಾ ಮುಖ್ಯೋಪಾಧ್ಯಾಯರು, ಶಾಲಾ ಶಿಕ್ಷಕರ ವೃಂದ ಹಾಗೂ ಅರುಣ ಆಚಾರ್ಯ ಈ ಪ್ರಾತ್ಯಕ್ಷಿಕೆಗೇ ಮಾರ್ಗದರ್ಶನ ನೀಡಿದರು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)