ಜೆಸಿಐ ಬೈಂದೂರು ಸಿಟಿಯಿಂದ ಸದ್ಭಾವನಾ ದಿನ

0
266

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

 

ಬೈಂದೂರಿನ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜೆಸಿಐ ಬೈಂದೂರು ಸಿಟಿ ವತಿಯಿಂದ ಸದ್ಭಾವನಾ ದಿನ ನಡೆಯಿತು.

ಜೆಸಿಐ ಬೈಂದೂರು ಸಿಟಿಯ ಅಧ್ಯಕ್ಷರಾದ ಪ್ರಿಯದರ್ಶಿನಿ ಬೆಸ್ಕೂರ್ ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಬೋಧಿಸಿದರು.
ಪ್ರಾಮಾಣಿಕ ಮಳಿಗೆಗಳನ್ನು ಶಾಲೆಯ ವಿದ್ಯಾರ್ಥಿ ನಾಯಕ ಮೋಹನ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕ್ಷೇತ್ರದ ಶಿಕ್ಷಣ ಅಧಿಕಾರಿ ಶ್ರೀಮತಿ ಜ್ಯೋತಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಗೆ ಚಿತ್ರಕಲೆ ಸ್ಪರ್ಧೆ ಏರ್ಪಡಿಸಿ ಬಹುಮಾನ ವಿತರಿಸಲಾಯಿತು.

ಶಾಲೆಯ ಮುಖ್ಯೋಪಾಧ್ಯಾಯರಾದ ಜನಾರ್ದನ ದೇವಾಡಿಗ ಹಾಗೂ ಗಣಪತಿ ಹೋಬಳಿದಾರ್ ಸಹಕಾರದಿಂದ ಕಾರ್ಯಕ್ರಮ ಯಶಸ್ವಿಯಾಯಿತು. ಜೆಸಿಐ ಬೈಂದೂರು ಸಿಟಿಯ ಕಾರ್ಯದರ್ಶಿ ಶ್ರೀಧರ್ ಆಚಾರ್, ಜೆಸಿರೆಟ್ ಅಧ್ಯಕ್ಷೆ ಭಾನುಮತಿ,ಸುಶಾಂತ್ ಆಚಾರ್, ರಕ್ಷಾ ಹೋಬಳಿದಾರ್, ಅನಿತಾ ಅರ್.ಕೆ,ಸುನಂದಾ ಗಾಣಿಗ ಹಾಗೂ ಸಂಕೇತ್ ಉಪಸ್ಥಿತರಿದ್ದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)