ವಿಜಯ ಮಕ್ಕಳ ಕೂಟ ಶಾಲೆಯಲ್ಲಿ ಗ್ರಂಥಾಲಯ, ಪ್ರಯೋಗಾಲಯಕ್ಕೆ ಶಿಲಾನ್ಯಾಸ

0
41

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ವಂಡ್ಸೆ ಗ್ರಾಮದ ಆತ್ರಾಡಿಯಲ್ಲಿರುವ ವಿಜಯ ಮಕ್ಕಳ ಕೂಟ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನೂತನ ಅಡುಗೆ ಕೋಣೆ, ಗ್ರಂಥಾಲಯ, ಪ್ರಯೋಗಾಲಯ ಕಟ್ಟಡಕ್ಕೆ ಶಿಲಾನ್ಯಾಸ ಕಾರ್ಯಕ್ರಮ ಫೆ.13ರಂದು ನಡೆಯಿತು.

ಜನ್ನಾಡಿಯ ಹೆಗ್ಡೆ ಕ್ಯಾಶೂಸ್‍ನ ಮಾಲಕರಾದ ಹೊಳ್ಮಗೆ ಶಂಕರ ಹೆಗ್ಡೆ ಶಿಲಾನ್ಯಾಸ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿ.ಎಂ.ಕೆ ಆಂಗ್ಲ ಮಾಧ್ಯಮ ಶಾಲೆಯ ಗವರ್ನರ್ ಕೌನ್ಸಿಲ್ ಅಧ್ಯಕ್ಷರಾದ ಬಿ.ಎನ್.ಶೆಟ್ಟಿ ವಹಿಸಿದ್ದರು. ವಂಡ್ಸೆ ಗ್ರಾಮ ಪಂಚಾಯತ್ ಅಧ್ಯಕ್ಷ ಉದಯಕುಮಾರ ಶೆಟ್ಟಿ, ನಿವೃತ್ತ ಡಿ.ಜಿಎಂ. ನಾರಾಯಣ ಶೆಟ್ಟಿ ಆತ್ರಾಡಿ-ವಂಡ್ಸೆ, ನಿವೃತ್ತ ಮುಖ್ಯೋಪಾಧ್ಯಾಯರಾದ ರಘುರಾಮ ಶೆಟ್ಟಿ ಹೊಳ್ಮಗೆ, ವೆಂಕಮ್ಮ ರಾಮಣ್ಣ ಶೆಟ್ಟಿ ಇದರ ಕಾರ್ಯದರ್ಶಿ ರಾಜೀವ ಶೆಟ್ಟಿ ಬಗ್ವಾಡಿ, ವಂಡ್ಸೆ ಗ್ರಾ.ಪಂ.ಉಪಾಧ್ಯಕ್ಷೆ ಶಾರದಾ ರುದ್ರಯ್ಯ ಆಚಾರ್ಯ, ವಿ.ಎಂ.ಕೆ ಗವರ್ನಿಂಗ್ ಕೌನ್ಸಿಲ್ ಸದಸ್ಯರಾದ ಕರುಣಾಕರ ಹೆಗ್ಡೆ ಹೆಗ್ಗುಂಜೆ, ಸಿವಿಎಲ್ ಗುತ್ತಿಗೆದಾರ ರುದ್ರಯ್ಯ ಆಚಾರ್ಯ ಉಪಸ್ಥಿತರಿದ್ದರು.

ಸ್ಥಳೀಯ ಪುರೋಹಿತರಾದ ಸುರೇಶ ಐತಾಳ್ ಧಾರ್ಮಿಕ ವಿಧಿವಿಧಾನ ನೆರವೇರಿಸಿದರು. ಸಂಸ್ಥೆಯ ಸಂಚಾಲಕ ಸುಭಾಶ್ಚಂದ್ರ ಶೆಟ್ಟಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮುಖ್ಯೋಪಾಧ್ಯಾಯಿನಿ ದೀಪಿಕಾ ಸುಭಾಸ್ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)