ಕನ್ನಡ ಭಾಷಾ ಶಿಕ್ಷಕರ ಕಾರ್ಯಾಗಾರ

0
186

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (2) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ಮಾರ್ಗದರ್ಶನದಲ್ಲಿ ವಲಯದ ಎಸ್‌.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಹೆಚ್ಚಳದ ಬಗ್ಗೆ ಕನ್ನಡ ಭಾಷಾ ಶಿಕ್ಷಕರ ಕಾರ್ಯಾಗಾರವು ಸರ್ಕಾರಿ ಪ್ರೌಢಶಾಲೆ ಕಿರಿಮಂಜೇಶ್ವರದಲ್ಲಿ ಇತ್ತಿಚೆಗೆ ನಡೆಯಿತು ತಾಲೂಕು ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಶ್ಯಾಮಲಾ ಕುಂದರ್ ರವರು ಕಾರ್ಯಾಗಾರವನ್ನು ಉದ್ಘಾಟಿಸಿದರು. ಸಭಾಧ್ಯಕ್ಷತೆಯನ್ನು ಜಿ.ಪಂ ಸದಸ್ಯರಾದ ಶ್ರೀಮತಿ ಗೌರಿ ದೇವಾಡಿಗರು ವಹಿಸಿದ್ದರು ಜಿಲ್ಲಾ ವಿದ್ಯಾಂಗ ಉಪ ನಿರ್ದೇಶಕರಾದ ಶ್ರೀ ಶೇಷ ಶಯನ ಕಾರಿಂಜ ರವರು ಗುಣಮಟ್ಟದ ಶಿಕ್ಷಣ ಮತ್ತು ಉತ್ತಮ ಫಲಿತಾಂಶ ಸಾಧಿಸುವ ಬಗ್ಗೆ ಮಾಹಿತಿ ನೀಡಿದರು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ಜ್ಯೋತಿ ಪ್ರಾಸ್ತಾವಿಕ ನುಡಿಗಳ ಮೂಲಕ ಸ್ವಾಗತಿಸಿದರು

ಜಿಲ್ಲಾ ವಿಷಯ ಪರಿವೀಕ್ಷಣಾ ಧಿಕಾರಿ ಗಳಾದ ಶ್ರೀ ಮಧುಕರ, ನಾಗರಾಜ ಸಮನ್ವಯಾಧಿಕಾರಿ ಅಬ್ದುಲ್ ರವೂಫ್ ಬಿ.ಆರ್.ಪಿ ಕರುಣಾಕರ ಶೆಟ್ಟಿ ಉಪಸ್ಥಿತರಿದ್ದರು ಸಂಪನ್ಮೂಲ ವ್ಯಕ್ತಿಗಳಾಗಿ ಶ್ರೀ ಗೊವಿಂದ ಬಿಲ್ಲವ, ಸುರೇಂದ್ರ ಶೆಟ್ಟಿ ಮತ್ತು ಜಗದೀಶ ಶೆಟ್ಟಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು ಶಾಲಾ ಮುಖ್ಯೋಪಾಧ್ಯಾಯ ಶ್ರೀ ಬೊಮ್ಮಯಿ ಗಾಂವ್ಕರ್ ವಂದಿಸಿದರು.

ವಲಯದ ಎಲ್ಲಾ ಪ್ರೌಢ ಶಾಲೆಗಳ ಕನ್ನಡ ಅಧ್ಯಾಪಕರು ಭಾಗವಹಿಸಿದ್ದರು

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (2) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)