ರಾಜ್ಯದ 25 ದೇಗುಲಗಳಲ್ಲಿ ಸರ್ಕಾರದಿಂದ `ಗೋಶಾಲೆ’ ನಿರ್ಮಾಣ

0
51

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಉಡುಪಿ : ರಾಜ್ಯದ ಎ ದರ್ಜೆಯ 25 ಶ್ರೀಮಂತ ದೇಗುಲಗಳಲ್ಲಿ ಮುಜರಾಯಿ ಇಲಾಖೆ ವತಿಯಿಂದ ಗೋ ಸಂರಕ್ಷಣೆ ಕೇಂದ್ರ ತೆರೆಯಲು ಇಲಾಖೆ ನಿರ್ಧರಿಸಿದ್ದು, ಈಗಾಗಲೇ ಪ್ರಸ್ತಾವನೆ ಸಲ್ಲಿಕೆಯಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಾರಂಭಿಕ ಹಂತದಲ್ಲಿ ಗೋ ಸಂರಕ್ಷಣಾ ಕೇಂದ್ರ ಸ್ಥಾಪನೆಗೆ ಉಡುಪಿ ಜಿಲ್ಲೆಯ ಮಂದಾರ್ತಿ ದೇವಸ್ಥಾನವನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಕೊಲ್ಲೂರು ದೇಗುಲದಲ್ಲಿ ಈಗಿರುವ ಗೋ ಕೇಂದ್ರವನ್ನು ವ್ಯವಸ್ಥಿತಗೊಳಿಸಲಾಗುತ್ತದೆ ಎಂದರು.

ಕಟೀಲು, ಕುಕ್ಕೆ ಸುಬ್ರಹ್ಮಣ್ಯ, ಸವದತ್ತಿ ಎಲ್ಲಮ್ಮ ಸೇರಿದಂತೆ 25 ಕಡೆಗಲ್ಲಿ ಗೋ ಸಂರಕ್ಷಣಾ ಕೇಂದ್ರ ಸ್ಥಾಪನೆಯಾಗಲಿದ್ದು, ಗ್ರಾಮೀಣ ಭಾಗದ ದೇಗುಲಗಳಿಗೆ ಹೆಚ್ಚು ಒತ್ತು ನೀಡಲಾಗುತ್ತಿದೆ ಎಂದು ಹೇಳಿದರು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)