ಕುಂದಾಪುರದಲ್ಲಿ ಸಿಕ್ಕಿಬಿದ್ದರು ಚಿನ್ನ‌ ಸಾಗಾಟ ಮಾಡುತ್ತಿದ್ದ ಹನ್ನೊಂದು ಮಂದಿ

0
92

ಹೆಚ್ಚಿನ ಓದುಗರು ಈ ಸುದ್ದಿಯನ್ನು ಅಸಮ್ಮತ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (1) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಕುಂದಾಪುರ : ಕೇರಳದ ಕ್ಯಾಲಿಕಟ್ ವಿಮಾನ ನಿಲ್ದಾಣದಿಂದ ಭಟ್ಕಳಕ್ಕೆ ಚಿನ್ನವನ್ನು ಅಕ್ರಮ ಸಾಗಾಟ ಮಾಡುತ್ತಿದ್ದ 11 ಮಂದಿಯನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ.

ಭಟ್ಕಳ ಮೂಲದ ನವೀದ್ (23), ಮಹಮ್ಮದ್ ಕಲೀಲ್ ಕಾಝಿಯಾ (62), ಮಹಮ್ಮದ್ ಅಸೀಮ್ (23), ಫೈಝ್ ಅಹಮ್ಮದ್ ಮವಾನ್ (29), ಮಹಮ್ಮದ್ ಅದ್ನಾನ್ (25) ಬಂಧಿತರು. ಬಂಧಿತರಿಂದ 1152.47 ಗ್ರಾಂ ತೂಕದ ಚಿನ್ನದ ನಾಣ್ಯಗಳನ್ನು ವಶಕ್ಕೆ ಪಡೆಯಲಾಗಿದೆ.

ಉಳಿದ ಆರೋಪಿಗಳಾದ ಮುಜ್ತಾಬಾ ಕಾಸೀಮ್, ಉಮೈರ್ ಅಹಮ್ಮದ್, ವಾಸಿಫ್ ಅಹಮದ್, ಮುಝಾಮಿಲ್, ಜಮೀಲ್, ಮೀರಾ ಸಮೀರ್ ಎನ್ನುವವರನ್ನು ವಿಚಾರಣೆ ಸಲುವಾಗಿ ಮಂಗಳೂರಿನ ಕಮಿಷನರ್ ಆಫ್ ಕಸ್ಟಮ್ಸ್ ಗೆ ಹಸ್ತಾಂತರ ಮಾಡಲಾಗಿದೆ. ಸ್ವಾಧೀನಪಡಿಸಿಕೊಂಡ ಚಿನ್ನದ ಒಟ್ಟು ಮೌಲ್ಯ 46 ಲಕ್ಷವಾಗಿದ್ದು, ವಾಹನಗಳ ಒಟ್ಟು ಮೌಲ್ಯ 10 ಲಕ್ಷ.

ದುಬೈನಿಂದ ಕ್ಯಾಲಿಕಟ್ ಏರ್ ಪೋರ್ಟಿಗೆ ಬಂದ ಭಟ್ಕಳ ಮೂಲದ ವ್ಯಕ್ತಿಗಳು ಕ್ಯಾಲಿಕಟ್ ನಿಂದ ಮಂಗಳೂರಿಗೆ ರೈಲಿನಲ್ಲಿ ಬಂದು ಅಲ್ಲಿಂದ ಭಟ್ಕಳಕ್ಕೆ ಕಾರಿನಲ್ಲಿ ಚಿನ್ನ ಸಾಗಾಟ ಮಾಡುತ್ತಿದ್ದರು. ಈ ಸಂಬಂಧ ಖಚಿತ ಮಾಹಿತಿ ಪಡೆದ ಕುಂದಾಪುರ ಎಎಸ್ಪಿ ಹರಿರಾಂ ಶಂಕರ್ ಮಾರ್ಗದರ್ಶನದಲ್ಲಿ ಸಿಪಿಐ ಗೋಪಿಕೃಷ್ಣ ಮತ್ತು ಸಿಬ್ಬಂದಿ ದಾಳಿ ನಡೆಸಿದ್ದಾರೆ.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಅಸಮ್ಮತ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (1) ಖಂಡಿಸುವೆ (0) ಅಭಿಪ್ರಾಯವಿಲ್ಲ (0)