ಮಡಿಕಲ್ ಅರಮಕೋಡಿ ಶ್ರೀ ಈಶ್ವರ ದೇವಸ್ಥಾನದ ಚಪ್ಪರ ಮುಹೂರ್ತ

0
486

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (2) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

     

ಉಪ್ಪುಂದ : ಬೈಂದೂರು ತಾಲೂಕಿನ ಉಪ್ಪುಂದ ಗ್ರಾಮದ ಅರಮಕೋಡಿ ಶ್ರೀ ಈಶ್ವರ ದೇವಸ್ಥಾನವು ಆರು ವರ್ಷದ ಬಳಿಕ ಸಂಪನ್ನಗೊಳ್ಳಲಿರುವ ನೂತನ ಶಿಲಾಮಯ ದೇಗುಲ ಲೋಕಾರ್ಪಣೆ, ಪುನರ್ ಪ್ರತಿಷ್ಠೆ, ಅಷ್ಟಬಂಧ, ಬ್ರಹಕಲಶೋತ್ಸವದ ಸಂಭ್ರಮದ ಕಾರ್ಯಕ್ರಮವು ಎ.21ರಿಂದ 29ರವರೆಗೆ ನಡೆಯಲಿದೆ.

ಇಂದು ಬೆಳಿಗ್ಗೆ ದೇವಸ್ಥಾನದ ಅರ್ಚಕರಾದ ಪರಮೇಶ್ವರ ಭಟ್ ರವರ ಸಹಯೋಗದಲ್ಲಿ ಚಪ್ಪರ ಮೂಹರ್ತ ಪೂಜೆ ನಡೆಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಅಧ್ಯಕ್ಷ ಬಿ. ಶ್ರೀಧರ ಖಾರ್ವಿ, ಕಾರ್ಯದರ್ಶಿ ರತ್ನಾಕರ ಖಾರ್ವಿ, ಕೋಶಾಧಿಕಾರಿ ನಾಗೇಶ ಖಾರ್ವಿ, ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ರತನ್‍ರಾಜ್ ಖಾರ್ವಿ, ಕಾರ್ಯದರ್ಶಿ ಪ್ರಸನ್ನ ಕುಮಾರ ಉಪ್ಪುಂದ, ಎಮ್.ಗೋವಿಂದ ಖಾರ್ವಿ, ಮಾಜಿ ಅಧಯಕ್ಷ ವೆಂಕಟ ಕುಂದರ್, ಉಪ್ಪುಂದ ರಾಣಿ ಬಲೆ ಮೀನುಗಾರರ ಒಕ್ಕೂಟದ ಅಧ್ಯಕ್ಷ ವೆಂಕಟರಮಣ ಖಾರ್ವಿ, ಸಮಿತಿ ಸದಸ್ಯರು, ಊರ ನಾಗರಿಕರು ಹಾಜರಿದ್ದರು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (2) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)