ಉಡುಪಿ ಜಿಲ್ಲೆಯಲ್ಲಿ ಮೊದಲ ಕೊರೋನಾ ಪಾಸಿಟಿವ್ ಪ್ರಕರಣ , ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಏರಿಕೆ

0
704

ಹೆಚ್ಚಿನ ಓದುಗರು ಈ ಸುದ್ದಿಯನ್ನು ಖಂಡಿಸುವೆ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (1) ಅಭಿಪ್ರಾಯವಿಲ್ಲ (0)

ಉಡುಪಿ: ರಾಜ್ಯದಲ್ಲಿ ಮತ್ತೊಬ್ಬರಿಗೆ ಕೊರೋನಾ ಸೋಂಕು ಪತ್ತೆಯಾಗಿದೆ. ಉಡುಪಿ ಜಿಲ್ಲೆಯಲ್ಲಿ ಮೊದಲ ಕೊರೋನಾ ಪಾಸಿಟಿವ್ ಪ್ರಕರಣ ಇದಾಗಿದೆ.

ಮಾರ್ಚ್ 18 ರಂದು ದುಬೈನಿಂದ ಬಂದಿದ್ದ ವ್ಯಕ್ತಿಗೆ ಸೋಂಕು ಇರುವುದು ದೃಢಪಟ್ಟಿದೆ. 34 ವರ್ಷದ ವ್ಯಕ್ತಿ ಮಾರ್ಚ್ 23 ರಿಂದ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಗಂಟಲು ದ್ರವ ಮತ್ತು ರಕ್ತದ ಮಾದರಿ ಪರೀಕ್ಷೆಗೆ ಕಳಿಸಲಾಗಿತ್ತು.

ಪ್ರಾಥಮಿಕ ವರದಿಯಲ್ಲಿ ಕೋರೋನಾ ಸೋಂಕು ಇರುವುದು ಪತ್ತೆಯಾಗಿದೆ ಎಂದು ಉಡುಪಿ ಡಿಹೆಚ್‌ಒ ಡಾ. ಸುಧೀರ್ ಚಂದ್ರಚೂಡ ಮಾಹಿತಿ ನೀಡಿದ್ದಾರೆ.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಖಂಡಿಸುವೆ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (1) ಅಭಿಪ್ರಾಯವಿಲ್ಲ (0)